News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶೀಘ್ರವೇ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಘೋಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಶೀಘ್ರದಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಈ ಮೂಲಕ ಗಡಿ ಖ್ಯಾತೆ ತೆಗೆದು ಪುಂಡಾಟ ಮೆರೆಯುತ್ತಿರುವ ಮಹಾರಾಷ್ಟ್ರಕ್ಕೆ ತಿರುಗೇಟು ನೀಡಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಶೀಘ್ರದಲ್ಲ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಭವನ ರಂಗಮದಿರ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕನ್ನಡಕ್ಕೆ ಉಜ್ವಲ ಭವಿಷ್ಯವಿದೆ. ಸಂಸ್ಕೃತಿ, ಭಾಷೆಗೂ ಬಹಳ ನಿಕಟ ಸಂಬಂಧವಿದೆ. ಒಂದು ಭಾಷೆಯು ನಾಡಿಗೂ, ದೇಶಕ್ಕೂ ಮುಖ್ಯ. ಸಂಸ್ಕೃತಿ ಇಲ್ಲದೇ ನಾವು ಮನುಷ್ಯರಾಗಿ ಬಾಳಲು ಸಾಧ್ಯವಿಲ್ಲ ಎಂದು ಹೇಳಿದರು.

ಕನ್ನಡ ಶ್ರೀಮಂತ ಭಾಷೆಯಾಗಿದೆ. ಪಂಪ, ರನ್ನ, ರಾಘವಾಂಕರಿಂದ ಈಗಿನ ನೂತನ ಸಾಹಿತಿಗಳವರೆಗೂ ದೊಡ್ಡ ಕೊಡುಗೆ ನೀಡಿದ್ದಾರೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಕನ್ನಡಕ್ಕೆ ಬಂದಿವೆ. ಹಳೆ ಕನ್ನಡ, ನುಡಿಗನ್ನಡ, ಜಾನಪದ ಕನ್ನಡವಿರುವಂತೆ ಕನ್ನಡ ಸಾಹಿತ್ಯದಲ್ಲಿಯೂ ಅನೇಕ ವಿಧಗಳಿವೆ. ವಚನ ಸಾಹಿತ್ಯ ತತ್ವ ತಾತ್ವಿಕತೆಯನ್ನು ನೀಡಿದೆ. ವಚನ ಸಾಹಿತ್ಯ, ದಾಸ ಸಾಹಿತ್ಯ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top