News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜನವರಿ 2-12ರ ವರೆಗೆ ಬಿಜೆಪಿಯಿಂದ ಬೂತ್ ವಿಜಯ ಅಭಿಯಾನ

ಬೆಳಗಾವಿ: ರಾಜ್ಯ ಬಿಜೆಪಿಯು ಜನವರಿ 2 ರಿಂದ ಜನವರಿ 12ರ ವರೆಗೆ ಬೂತ್ ವಿಜಯ ಅಭಿಯಾನವನ್ನು ಆಯೋಜಿಸಿದೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬೆಳಗಾವಿ ಸುವರ್ಣಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

“58,156 ಬೂತ್‌ಗಳು, 11,642 ಶಕ್ತಿ ಕೇಂದ್ರಗಳು, 1,445 ಮಹಾ ಶಕ್ತಿ ಕೇಂದ್ರಗಳು, 312 ಮಂಡಲಗಳು, 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯಲಿದೆ. ರಾಜ್ಯ, ಜಿಲ್ಲಾ, ಎಲ್ಲ ಘಟಕಗಳು, ಕಾರ್ಯಕರ್ತರು ಇದರಲ್ಲಿ ಭಾಗವಹಿಸಲಿದ್ದಾರೆ” ಎಂದಿದ್ದಾರೆ.

ಅಭಿಯಾನದಡಿ ರಾಜ್ಯದಲ್ಲಿರುವ ಪಕ್ಷದ ಕಾರ್ಯಕರ್ತರ ಹಾಗೂ ಮತದಾರರ 50 ಲಕ್ಷ ಮನೆಗಳಲ್ಲಿ ಏಕಕಾಲದಲ್ಲಿ ಬಿಜೆಪಿ ಧ್ವಜ ಹಾರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಯುವ ಅರ್ಹ ಮತದಾರರನ್ನು ಮತಪಟ್ಟಿಯಲ್ಲಿ ಸೇರಿಸಲಾಗುವುದು, ಪ್ರತಿ ಬೂತ್‍ಗಳಲ್ಲಿ ಶೇ 100 ಮತದಾನ ಆಗುವ ರೀತಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. 20 ಲಕ್ಷ ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top