News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದಲ್ಲಿ 1 ವರ್ಷದಲ್ಲಿ 100 ಪೊಲೀಸ್‌ ಠಾಣೆಗಳ ನಿರ್ಮಾಣ: ಸಿಎಂ

ಬೆಳಗಾವಿ: ಕರ್ನಾಟಕದಲ್ಲಿ ಒಂದು ವರ್ಷದ ಅವಧಿಯಲ್ಲಿ ನೂರಕ್ಕೂ  ಹೆಚ್ಚು ಪೊಲೀಸ್  ಠಾಣೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ, ಅದರಲ್ಲಿ 16 ಪೊಲೀಸ್‌ ಠಾಣೆಗಳು ಈಗಾಗಲೇ ನಿರ್ಮಾಣ ಹಂತದಲ್ಲಿವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಬೆಳಗಾವಿ ಪೊಲೀಸ್  ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

“ಪೊಲೀಸ್  ‌ಗೃಹ ಮಂಡಳಿಯು ರಾಜ್ಯದಲ್ಲಿ 2500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ. ‌ಒಂದೇ ವರ್ಷದಲ್ಲಿ ನೂರಕ್ಕೂ  ಹೆಚ್ಚು ಪೊಲೀಸ್  ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 80 ಕೋಟಿ ರೂ.ಗಳ ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೊ ಖರೀದಿ ಮಾಡಲಾಗುತ್ತಿದೆ.‌ ಡಿವೈ ಎಸ್ಪಿಗಳಿಗೆ ಸ್ಕಾರ್ಪಿಯೊ ವಾಹನಗಳನ್ನು  ನೀಡಲಾಗುತ್ತಿದೆ” ಎಂದರು.

ಸಮಾಜದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಚಟುವಟಿಕೆಗಳ ನಿಯಂತ್ರಣದಲ್ಲಿ ಪೊಲೀಸರ ಪಾತ್ರ ಮಹತ್ವದ್ದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top