News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ತಾಯಿ ಹೀರಾಬೆನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವರ್ಷದ ಜೂನ್‌ನಲ್ಲಿ 99 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರನ್ನು ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್‌ನ ಹೇಳಿಕೆಯ ಪ್ರಕಾರ ಅವರ ಸ್ಥಿತಿ ಸ್ಥಿರವಾಗಿದೆ. ಆಸ್ಪತ್ರೆಯು ಬೇರೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

ತನ್ನ ತಾಯಿಯೊಂದಿಗಿನ ಬಾಂಧವ್ಯದ ಬಗ್ಗೆ ಆಗಾಗ್ಗೆ ಮಾತನಾಡುವ ಪ್ರಧಾನಿ ಅವರು ಇತ್ತೀಚೆಗೆ ಗುಜರಾತ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಪ್ರಚಾರದ ನೇಪಥ್ಯದಲ್ಲಿ ಅವರನ್ನು ಭೇಟಿಯಾದರು. ಹೀರಾಬೆನ್ ಮೋದಿ ಅವರೊಂದಿಗೆ ಪ್ರಧಾನಿ ಹರಟೆ ಮತ್ತು ಚಹಾ ಸೇವಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡು ವೈರಲ್‌ ಆಗಿದ್ದವು.

ಜೂನ್‌ನಲ್ಲಿ ತಾಯಿಯ 99 ನೇ ಹುಟ್ಟುಹಬ್ಬದಂದು ಪ್ರಧಾನಿ ಅವರನ್ನು ಭೇಟಿ ಮಾಡಿದ್ದರು. ಅವರ ಶತಮಾನೋತ್ಸವದ ಪ್ರಯುಕ್ತ ಪ್ರಧಾನಿಯವರು ‘ತಾಯಿ’ ಎಂಬ ಶೀರ್ಷಿಕೆಯ ಭಾವನಾತ್ಮಕ ಬ್ಲಾಗ್ ಅನ್ನು ಸಹ ಬರೆದಿದ್ದರು.

ಕರ್ನಾಟಕದ ಮೈಸೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಮತ್ತು ಇತರ ಕುಟುಂಬ ಸದಸ್ಯರು ಗಾಯಗೊಂಡ ಬೆನ್ನಲ್ಲೇ ಹೀರಾಬೆನ್ ಮೋದಿ ಆಸ್ಪತ್ರೆಗೆ ದಾಖಲಾದ ಸುದ್ದಿ ಬಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top