News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಲಕ್ನೋ ಬಳಿ ಬೀಜ ಉದ್ಯಾನವನವನ್ನು ಸ್ಥಾಪಿಸಲಿದೆ ಉತ್ತರಪ್ರದೇಶ

ಲಕ್ನೋ: ಉತ್ತಮ ಗುಣಮಟ್ಟದ ಬೀಜಗಳ ಉತ್ಪಾದನೆಯನ್ನು ಹೆಚ್ಚಿಸಲು ಉತ್ತರಪ್ರದೇಶ ಸರ್ಕಾರವು ಲಕ್ನೋ ಬಳಿ ಬೀಜ ಉದ್ಯಾನವನವನ್ನು ಸ್ಥಾಪಿಸಲು ಮುಂದಾಗಿದೆ.

ಯುಪಿ ಕೃಷಿ ಸಚಿವ ಸೂರ್ಯ ಪ್ರತಾಪ್ ಶಾಹಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯವು ಬೀಜಗಳ ಖರೀದಿಗೆ ಸುಮಾರು 2,000 ರೂ. ವ್ಯಯಿಸುತ್ತಿರುವ ಹಿನ್ನೆಲೆಯಲ್ಲಿ ಬೀಜ ಉದ್ಯಾನವನವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಕೃಷಿ ಮೂಲಸೌಕರ್ಯ ಅಭಿವೃದ್ಧಿಗೆ ಸುಮಾರು 700 ಕೋಟಿ ರೂ.ವ್ಯಯಿಸುತ್ತಿದೆ ಎಂದ ಅವರು,  ರಾಜ್ಯ ಸರ್ಕಾರವು ರೈತರ ಮೂಲಕ ಬೀಜ ಉತ್ಪಾದನೆಯನ್ನು ಪ್ರಾರಂಭಿಸಿದೆ ಎಂಬ ಮಾಹಿತಿ ನೀಡಿದ್ದಾರೆ.

60 ಕೋಟಿ ಬಂಡವಾಳ ಹೂಡಿ 100 ಬೀಜ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್‌ಗೆ ಹೆಚ್ಚಿಸುವಲ್ಲಿ ಕೃಷಿ ಕ್ಷೇತ್ರವು ಪ್ರಮುಖ ಪಾತ್ರ ವಹಿಸಲಿದೆ ಎಂದ ಅವರು, ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷದ ಮಹತ್ವವನ್ನು ಪರಿಗಣಿಸಿ, ಅದನ್ನು ಪಠ್ಯಕ್ರಮದಲ್ಲಿ ಸೇರಿಸುವುದು ಮಾತ್ರವಲ್ಲದೆ ಬೀಜಗಳನ್ನು ಉತ್ಪಾದಿಸಲು ಮತ್ತು ಮಾರುಕಟ್ಟೆಗೆ ವೇದಿಕೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಸಚಿವರು ಹೇಳಿದರು.

ಸಚಿವರ ಪ್ರಕಾರ ಸಿರಿಧಾನ್ಯ ಉತ್ಪಾದನೆಗೆ ಕಾಮಗಾರಿ ಆರಂಭವಾಗಿದ್ದು ಮಾತ್ರವಲ್ಲದೆ ಜೋಳದ ಪ್ರದೇಶವನ್ನೂ ಹೆಚ್ಚಿಸಲಾಗಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top