News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಹ್ಮದಾಬಾದ್‌ ಆಸ್ಪತ್ರೆಗೆ ಆಗಮಿಸಿ ತಾಯಿಯ ಆರೋಗ್ಯ ವಿಚಾರಿಸಿದ ಮೋದಿ

ಅಹ್ಮದಾಬಾದ್‌: ತಮ್ಮ ತಾಯಿ ಹೀರಾಬೆನ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ತಿಳಿದೊಡನೆ ಅಹ್ಮದಾಬಾದ್‌ಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಆಸ್ಪತ್ರೆಗೆ ತೆರಳಿ ತಾಯಿಯ ಯೋಗಕ್ಷೇಮ ವಿಚಾರಿಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಅವರ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ ಕೈಲಾಸನಾಥನ್ ಅವರು ಕೂಡ ಹೀರಾಬೆನ್ ಅವರ ಆರೋಗ್ಯವನ್ನು ವಿಚಾರಿಸಲು ಆಸ್ಪತ್ರೆಗೆ ತಲುಪಿದ್ದಾರೆ.

ಹೀರಾಬೆನ್ ಮೋದಿ ಅವರನ್ನು ಅಹಮದಾಬಾದ್‌ನ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚೆಗಷ್ಟೇ ನಡೆದ ಗುಜರಾತ್ ವಿಧಾನಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಅವರು ಈ ವರ್ಷದ ಜೂನ್‌ನಲ್ಲಿ 100ನೇ ವರ್ಷಕ್ಕೆ ಕಾಲಿಟ್ಟ ತಮ್ಮ ತಾಯಿಯನ್ನು ಭೇಟಿ ಮಾಡಿದ್ದರು. ಹೀರಾಬೆನ್ ಕೂಡ ಚುನಾವಣೆಯಲ್ಲಿ ಮತ ಚಲಾಯಿಸಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top