News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೇರಳ: ಪಿಎಫ್‌ಐಗೆ ಸಂಬಂಧಿಸಿದ 50 ಸ್ಥಳಗಳ ಮೇಲೆ ಎನ್‌ಐಎ ದಾಳಿ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಕೇರಳದಲ್ಲಿ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕರು ಮತ್ತು ಸಹಚರರನ್ನು ಗುರಿಯಾಗಿಸಿಕೊಂಡು ಬೃಹತ್ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಇಂದು ಮುಂಜಾನೆಯಿಂದ ರಾಜ್ಯದ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಪಿಎಫ್‌ಐ ನಾಯಕರ  ಬೇರೆ ಯಾವುದಾದರೂ ಹೆಸರಿನಲ್ಲಿ ಮರುಸಂಘಟನಾ ಯೋಜನೆಯನ್ನು ಹಾಕಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.

ರಾಜ್ಯಾದ್ಯಂತ ಪ್ರಮುಖವಾಗಿ ಎರ್ನಾಕುಲಂ, ತಿರುವನಂತಪುರಂ, ಮಲಪ್ಪುರಂ, ಆಲಪ್ಪುಳ, ಕೋಝಿಕ್ಕೋಡ್ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ವಿವಿಧೆಡೆ ದಾಳಿ ನಡೆಯುತ್ತಿದೆ.

ಪಿಎಫ್‌ಐ ಕೇರಳ ಮೂಲದ ಮೂಲಭೂತವಾದಿ ಸಂಘಟನೆಯಾಗಿದ್ದು, ಇದು ದೇಶದ ವಿವಿಧ ಭಾಗಗಳಲ್ಲಿ ಹರಡಿತು, ಈ ವರ್ಷದ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಇದಕ್ಕೆ ನಿಷೇಧ ಹೇರಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top