ಮಂಡ್ಯ : ಶುಕ್ರವಾರ (ಡಿಸೆಂಬರ್ 30) ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರ ಸ್ವಾಗತಕ್ಕೆ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಬಗೆಹರಿಸಿದೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಬೇರುಮಟ್ಟದಿಂದ ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಏಳು ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ.ಎಲ್ಲ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಸಮರ್ಥ ಅಭ್ಯರ್ಥಿಗಳಿದ್ದಾರೆ. ಕಾರ್ಯಕ್ರಮದ ಯಶಸ್ವಿಗಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ರಾಜ್ಯದ ಸಚಿವರು, ಪಕ್ಷದ ರಾಜ್ಯಾಧ್ಯಕ್ಷರು ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.