News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಜಲ ಆಯೋಗ ಅನುಮತಿ: ಪ್ರಧಾನಿಗೆ ನಳಿನ್‍ ಧನ್ಯವಾದ

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ.

ಕಳಸಾ ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಈ ಹಿಂದೆ ಕಳಸಾ ಬಂಡೂರಿ ಯೋಜನೆಗೆ ನಾವು ಹೋರಾಟ ಮಾಡಿದ್ದೇವೆ. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದರೊಂದಿಗೆ ಉತ್ತರ ಕರ್ನಾಟಕದ ಬಹುಬೇಡಿಕೆಯ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ತೋರಿದೆ. ರಾಜ್ಯ ಸರ್ಕಾರ ಕಳುಹಿಸಿದ್ದ ಡಿಪಿಆರ್ ವರದಿಗೆ ಜಲ ಆಯೋಗದಿಂದ ಅನುಮತಿ ಸಿಕ್ಕಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಜನರಿಗೆ ಇದು ಶುಭ ಸುದ್ದಿ ಆಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top