News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರಧಾನಿ ಮೋದಿಗೆ ಮಾತೃವಿಯೋಗ: ಗಣ್ಯರ ಕಂಬನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು ತಮ್ಮ 100 ನೇ ವಯಸ್ಸಿನಲ್ಲಿ ನಿಧನರಾದರು. ಪ್ರಧಾನಿ ಮೋದಿ ಅವರು ಟ್ವಿಟರ್‌ನಲ್ಲಿ ತಮ್ಮ ತಾಯಿಯ ನಿಧನದ ದುಃಖದ ಬಗ್ಗೆ ದೇಶಕ್ಕೆ ತಿಳಿಸಿದ್ದಾರೆ.

“ಭವ್ಯವಾದ ಶತಮಾನವು ಭಗವಂತನ ಪಾದದ ಕೆಳಗೆ ವಿಶ್ರಮಿಸುತ್ತಿದೆ. ಅಮ್ಮನಲ್ಲಿ ನಾನು ಸದಾ ಆ ತ್ರಿಮೂರ್ತಿ ಸ್ವರೂಪವನ್ನು ಕಂಡಿದ್ದೇನೆ, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಇತ್ತೀಗಷ್ಟೇ 100ನೇ ವಸಂತಕ್ಕೆ ಕಾಲಿಟ್ಟಿದ್ದ ಹೀರಾಬೆನ್‌ ಮೋದಿ ಅವರು ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣ ಅಹ್ಮದಾಬಾದಿನಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಧಾನಿ ಮೋದಿ ಆಸ್ಪತ್ರೆಗೆ ತೆರಳಿ ತಾಯಿಯ ಆರೋಗ್ಯ ವಿಚಾರಿಸಿದ್ದರು.

ಹೀರಾಬೆನ್ ಮೋದಿ ಅವರು ಜೂನ್ 18, 1923 ರಂದು ಗುಜರಾತ್‌ನ ಗಾಂಧಿನಗರದ ರೈಸನ್ ಗ್ರಾಮದಲ್ಲಿ ಜನಿಸಿದರು.

ಪ್ರಧಾನಿ ತಾಯಿಯ ನಿಧನಕ್ಕೆ ಅಮಿತ್‌ ಶಾ, ವೆಂಕಯ್ಯ ನಾಯ್ಡು, ಯೋಗಿ ಆದಿತ್ಯನಾಥ ಸೇರಿದಂತೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top