News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಲಸಿಗರಿಗಾಗಿ ಚುನಾವಣಾ ಆಯೋಗ ಪರಿಚಯಿಸಲಿದೆ ʼರಿಮೋಟ್‌ ವೋಟಿಂಗ್‌ʼ

ನವದೆಹಲಿ: ಚುನಾವಣಾ ಆಯೋಗವು ಅಂತರ್‌ ರಾಜ್ಯ ವಲಸಿಗರಿಗೆ ‘ರಿಮೋಟ್ ವೋಟಿಂಗ್’ ಅನ್ನು ಪರಿಚಯಿಸಲು ಮುಂದಾಗಿದೆ. ದೂರ ನಿಯಂತ್ರಿತ ವಿದ್ಯುನ್ಮಾನ ಮತಯಂತ್ರವನ್ನು ಇದಕ್ಕಾಗಿ ಅಭಿವೃದ್ಧಿಪಡಿಸಿದೆ.

ದೂರ ನಿಯಂತ್ರಿತ ವಿದ್ಯುನ್ಮಾನ ಮತ ಯಂತ್ರ ಪ್ರಸ್ತುತ ಬಳಕೆಯಲ್ಲಿರುವ ಇವಿಎಂನ ಎಲ್ಲಾ ಭದ್ರತಾ ವೈಶಿಷ್ಟ್ಯಗಳನ್ನು ಉಳಿಸಿಕೊಂಡಿದೆ. ಇದು ದೂರದ ಮತಗಟ್ಟೆಯಿಂದ 72 ಬಹು ಕ್ಷೇತ್ರಗಳನ್ನು ನಿರ್ವಹಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ.

ವಲಸಿಗರು ತಾವಿರುವ ಜಾಗದಿಂದಲೇ ಮತದಾನ ಮಾಡಲು ಈ ಮತಯಂತ್ರ ಅನುವು ಮಾಡಿಕೊಡುತ್ತದೆ. ವಿವಿಧ ಕಾರಣಗಳಿಂದ ಆಗಾಗ ನಿವಾಸ ಬದಲಾಯಿಸುವವರಿಗೆ ಇದು ಸಾಕಷ್ಟು ಪ್ರಯೋಜನ ನೀಡುತ್ತದೆ. ಇದು ಸಾಮಾಜಿಕ ಪರಿವರ್ತನೆಗೆ ಕಾರಣವಾಗಬಲ್ಲದು ಎಂದು ವಿಶ್ಲೇಷಿಸಲಾಗಿದೆ.

ರಿಮೋಟ್ ಎಲೆಕ್ಟ್ರಾನಿಕ್ ಮತಯಂತ್ರದ ಕಾರ್ಯನಿರ್ವಹಣೆಯನ್ನು ಪ್ರದರ್ಶಿಸಲು ಆಯೋಗವು ಮುಂದಿನ ವರ್ಷದ ಜನವರಿ 16 ರಂದು ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳನ್ನು ಆಹ್ವಾನಿಸಿದೆ. ತಾಂತ್ರಿಕ ತಜ್ಞರ ಸಮಿತಿಯ ಸದಸ್ಯರು ಸಭೆಯಲ್ಲಿ ಈ ಮತಯಂತ್ರದ ಪ್ರಾತ್ಯಕ್ಷಿಕೆ ನಡೆಯಲಿದೆ.

ದೇಶೀಯ ವಲಸಿಗರಿಗೆ ಕಾನೂನಿನಲ್ಲಿ ಅಗತ್ಯವಿರುವ ಬದಲಾವಣೆಗಳು, ಆಡಳಿತಾತ್ಮಕ ಕಾರ್ಯವಿಧಾನಗಳಲ್ಲಿನ ಬದಲಾವಣೆಗಳು ಮತ್ತು ಮತದಾನದ ವಿಧಾನ ಸೇರಿದಂತೆ ವಿವಿಧ ಸಂಬಂಧಿತ ವಿಷಯಗಳ ಕುರಿತು ಜನವರಿ 31 ರೊಳಗೆ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಲಿಖಿತ ಅಭಿಪ್ರಾಯಗಳನ್ನು ಕೋರಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top