ನವದೆಹಲಿ: ಇಂದು ಬೆಳಗ್ಗೆ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೆ ಒಳಗಾಗಿದ್ದು, ಅವರು ಗಂಭೀರ ಸ್ವರೂಪದಲ್ಲಿ ಅಪಘಾತಕ್ಕೀಡಾಗಿದ್ದಾರೆ. ಈ ಘಟನೆ ಇಡೀ ಕ್ರಿಕೆಟ್ ಜಗತ್ತನ್ನು ಬೆಚ್ಚಿಬೀಳಿಸಿದೆ. ಪಂತ್ ತನ್ನ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ದೆಹಲಿಯಿಂದ ಉತ್ತರಾಖಂಡಕ್ಕೆ ಪ್ರಯಾಣಿಸುತ್ತಿದ್ದಾಗ ರೂರ್ಕಿ ಬಳಿ ಅಪಘಾತಕ್ಕೀಡಾದರು. ಅವರ ಹಣೆಯ ಮೇಲೆ ಎರಡು ಗಾಯಗಳು ಮತ್ತು ಬಲ ಮೊಣಕಾಲಿಗೆ ಪೆಟ್ಟು ಬಿದ್ದಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ಅವರನ್ನು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಹಿತಿ ನೀಡಿದೆ.
ಅಪಘಾತದ ಸುದ್ದಿ ತಿಳಿದಾಗಿನಿಂದ ಎಲ್ಲೆಡೆಯಿಂದ ಪ್ರಾರ್ಥನೆಗಳು ಮತ್ತು ಹಾರೈಕೆಯ ಮಹಾಪೂರವೇ ಹರಿದುಬರುತ್ತಿದೆ.
ಘಟನೆಯ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಪ್ರತಿಕ್ರಿಯಿಸಿದ್ದು, “ಖ್ಯಾತ ಕ್ರಿಕೆಟಿಗ ರಿಷಭ್ ಪಂತ್ ಅವರ ಅಪಘಾತದಿಂದ ನೊಂದಿದ್ದೇನೆ. ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ತಾಯಿಯ ಅಗಲುವಿಕೆಯ ನೋವಿನ ನಡುವೆಯೂ ಮೋದಿ ಕ್ರಿಕೆಟಿಗನ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿರುವ ಪ್ರಧಾನಿಯ ನಡೆ ಎಲ್ಲರ ಹೃದಯತಟ್ಟಿದೆ.
Distressed by the accident of noted cricketer Rishabh Pant. I pray for his good health and well-being. @RishabhPant17
— Narendra Modi (@narendramodi) December 30, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.