News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇ-ಸಂಜೀವಿನಿಯಡಿ ನಡೆಸಲಾಗಿದೆ 8.50 ಕೋಟಿಗೂ ಅಧಿಕ ಟೆಲಿ ಸಮಾಲೋಚನೆ

ನವದೆಹಲಿ: ಇ-ಸಂಜೀವಿನಿ ಮೂಲಕ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಲ್ಲಿ ಇದುವರೆಗೆ 8. 50 ಕೋಟಿಗೂ ಅಧಿಕ ಟೆಲಿ ಸಮಾಲೋಚನೆಗಳನ್ನು ನಡೆಸಲಾಗಿದೆ ಎಂದು ಸರ್ಕಾರ ಹೇಳಿದೆ.

ಆರೋಗ್ಯ ಸೇವೆಗಳನ್ನು ಪಡೆಯಲು ಈ ನವೀನ ಡಿಜಿಟಲ್ ಮಾಧ್ಯಮವನ್ನು ಬಳಸಿಕೊಂಡು ರೋಗಿಗಳು ಪ್ರತಿದಿನ ವೈದ್ಯರು ಮತ್ತು ತಜ್ಞರೊಂದಿಗೆ ಸಮಾಲೋಚಿಸುತ್ತಾರೆ.

ದೇಶಾದ್ಯಂತ 1.50 ಲಕ್ಷ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಗಮನಾರ್ಹ ಹೆಗ್ಗುರುತನ್ನು ಭಾರತ ಮೀರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಈ ಕೇಂದ್ರಗಳು ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳ ವಿತರಣೆಯನ್ನು ಪರಿವರ್ತಿಸುತ್ತಿವೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

ಪ್ರತಿದಿನ ಸುಮಾರು ನಾಲ್ಕು ಲಕ್ಷ ಟೆಲಿ ಸಮಾಲೋಚನೆ ನಡೆಯುತ್ತವೆ. ಈ ಕೇಂದ್ರಗಳು ಎಲ್ಲಾ ವಯೋಮಾನದವರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಉಚಿತವಾಗಿ ಒದಗಿಸುತ್ತವೆ. 86 ಕೋಟಿಗೂ ಹೆಚ್ಚು ಫಲಾನುಭವಿಗಳು  ರೋಗಗಳಿಗೆ  ತಪಾಸಣೆಗೊಳಪಟ್ಟಿದ್ದಾರೆ. ಇದರಲ್ಲಿ ಅಧಿಕ ರಕ್ತದೊತ್ತಡಕ್ಕೆ ಸುಮಾರು 30 ಕೋಟಿ, ಮಧುಮೇಹಕ್ಕೆ 25 ಕೋಟಿಗೂ ಹೆಚ್ಚು, ಬಾಯಿ ಕ್ಯಾನ್ಸರ್‌ಗೆ 17 ಕೋಟಿ ಮತ್ತು ಸ್ತನ ಕ್ಯಾನ್ಸರ್‌ಗೆ ಎಂಟು ಕೋಟಿಗೂ ಹೆಚ್ಚು ಜನ ಚಿಕಿತ್ಸೆ ಪಡೆದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top