News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

9,000 ದಾಟಿದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆ

ನವದೆಹಲಿ: ಇಂದು ದೇಶದಲ್ಲಿನ ಒಟ್ಟು ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆ 9,000 ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ತಿಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಜನರಿಗೆ ಅಗ್ಗದ ಹಾಗೂ ಉತ್ತಮ ಔಷಧ ನೀಡುವ ಉದ್ದೇಶದಿಂದ ಈ ಕೇಂದ್ರಗಳನ್ನು ಆರಂಭಿಸಲಾಗಿದೆ. ಇಂದು, ಈ ಕೇಂದ್ರಗಳು ದೇಶದ ಪ್ರತಿ ಜಿಲ್ಲೆಯ ಲಕ್ಷಾಂತರ ಜನರಿಗೆ ಪ್ರಯೋಜನಗಳನ್ನು ನೀಡುತ್ತಿವೆ ಎಂದು ಅವರು ಹೇಳಿದರು.

2008 ರ ನವೆಂಬರ್‌ನಲ್ಲಿ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ಫಾರ್ಮಾಸ್ಯುಟಿಕಲ್ಸ್ ಇಲಾಖೆಯಿಂದ ಜನೌಷಧಿ ಯೋಜನೆಯನ್ನು ಪ್ರಾರಂಭಿಸಲಾಯಿತು. ಈ ಯೋಜನೆಗೆ ಮತ್ತಷ್ಟು ಉತ್ತೇಜನ ನೀಡಲು, ಇದನ್ನು 2016 ರಲ್ಲಿ ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ (PMBJP) ಎಂದು ಮರುನಾಮಕರಣ ಮಾಡಲಾಯಿತು.

ಕೈಗೆಟುಕುವ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧವನ್ನು ಒದಗಿಸಲು ಮಾರ್ಚ್ 2025 ರ ವೇಳೆಗೆ ದೇಶದಾದ್ಯಂತ 10,500 ಜನೌಷಧಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಸರ್ಕಾರ ಹೊಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top