News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನರೇಗಾದಡಿ 289 ಕೋಟಿಗೂ ಅಧಿಕ ಮಾನವ ದಿನಗಳ ಉದ್ಯೋಗ ಸೃಷ್ಟಿ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 11.37 ಕೋಟಿಗೂ ಹೆಚ್ಚು ಕುಟುಂಬಗಳು ಉದ್ಯೋಗವನ್ನು ಪಡೆದುಕೊಂಡಿವೆ ಮತ್ತು  ಈ ತಿಂಗಳ 15 ರವರೆಗೆ 289 ಕೋಟಿಗೂ ಹೆಚ್ಚು ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ.

ಒಟ್ಟು ಮಾನವ ದಿನಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಶೇಕಡಾವಾರು ಶೇಕಡಾ 56.19 ರಷ್ಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಹೇಳಿದೆ. ಇದುವರೆಗೆ 5.17 ಕೋಟಿಗೂ ಹೆಚ್ಚು ಆಸ್ತಿಗಳನ್ನು ಜಿಯೋ ಟ್ಯಾಗ್ ಮಾಡಲಾಗಿದೆ ಮತ್ತು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅಮೃತ್ ಸರೋವರಗಳ ನಿರ್ಮಾಣದ ಪ್ರಗತಿಯ ಕುರಿತು ಸಚಿವಾಲಯವು ಮಾಹಿತಿ ನೀಡಿದ್ದು,  25,951 ಅಮೃತ ಸರೋವರಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಅಡಿಯಲ್ಲಿ ಒಟ್ಟು 2.50 ಕೋಟಿ ಮನೆಗಳನ್ನು ಮಂಜೂರು ಮಾಡಲಾಗಿದ್ದು, ಎರಡು ಕೋಟಿ 11 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಾಹಿತಿ ನೀಡಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು 52.78 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿಯ ಪೈಕಿ ಒಟ್ಟು 31.43 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗಿದೆ.

ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ 8 ಕೋಟಿ 71 ಲಕ್ಷ ಮಹಿಳೆಯರನ್ನು 81 ಲಕ್ಷ ಸ್ವಸಹಾಯ ಗುಂಪುಗಳಾಗಿ ಸಜ್ಜುಗೊಳಿಸಿದೆ ಎಂದು ಸಚಿವಾಲಯ ತಿಳಿಸಿದೆ. ಈ ಯೋಜನೆಯು ಬಡವರ ಸ್ವಯಂ ಉದ್ಯೋಗವನ್ನು ಉತ್ತೇಜಿಸುವ ಪ್ರಮುಖ ಬಡತನ ನಿರ್ಮೂಲನೆ ಕಾರ್ಯಕ್ರಮವಾಗಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ಸಾಧಿಸಿದ ಪ್ರಗತಿಯ ಕುರಿತು ಮಾಹಿತಿ ನೀಡಿದ ಸಚಿವಾಲಯವು 39 , 413 ಕಿಲೋಮೀಟರ್ ರಸ್ತೆಗಳು ಮತ್ತು 1, 394 ಸೇತುವೆಗಳನ್ನು 23 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top