News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡಿಸೆಂಬರ್‌ನಲ್ಲಿ ಸಂಗ್ರಹವಾದ ಜಿಎಸ್‌ಟಿ 1.49 ಲಕ್ಷ ಕೋಟಿ ರೂಪಾಯಿ

ನವದೆಹಲಿ: ಡಿಸೆಂಬರ್ 2022 ರಲ್ಲಿ ಸರಕು ಮತ್ತು ಸೇವಾ ತೆರಿಗೆಯಿಂದ (ಜಿಎಸ್‌ಟಿ) ಸಂಗ್ರಹವಾದ ಆದಾಯ  15 ಪ್ರತಿಶತದಷ್ಟು ಏರಿಕೆಯಾಗಿದ್ದು, 1.49 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಇದು ಉತ್ತಮ ಪ್ರಗತಿಯ ಜೊತೆಗೆ ಸುಧಾರಿತ  ಉತ್ಪಾದನೆ ಮತ್ತು ಬಳಕೆಯ ಬೇಡಿಕೆಯನ್ನು ಸೂಚಿಸುತ್ತದೆ.

ಇದು ಸತತ 10ನೇ ತಿಂಗಳು ಆದಾಯವು 1.4 ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟಿದೆ. ನವೆಂಬರ್‌ನಲ್ಲಿ ಸುಮಾರು 1.46 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿತ್ತು.

“ಡಿಸೆಂಬರ್ 2022 ರಲ್ಲಿ ಒಟ್ಟು ಜಿಎಸ್‌ಟಿ ಆದಾಯವು 1,49,507 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಸಿಜಿಎಸ್‌ಟಿ 26,711 ಕೋಟಿ ರೂ., ಎಸ್‌ಜಿಎಸ್‌ಟಿ 33,357 ಕೋಟಿ ರೂ., ಐಜಿಎಸ್‌ಟಿ 78,434 ಕೋಟಿ ರೂ. (ಸರಕುಗಳ ಆಮದಿನ ಮೇಲೆ ಸಂಗ್ರಹವಾದ ಮೊತ್ತ ರೂ. 40,263 ಕೋಟಿ ಸೇರಿ ) ಮತ್ತು ಸೆಸ್ 11,005 ಕೋಟಿ‌ ರೂ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ 850 ಕೋಟಿ ರೂ. ಸೇರಿದಂತೆ)” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಡಿಸೆಂಬರ್ 2022 ರ ಆದಾಯವು ಕಳೆದ ವರ್ಷದ ಇದೇ ತಿಂಗಳ ಜಿಎಸ್‌ಟಿ ಸಂಗ್ರಹಕ್ಕಿಂತ 15 ಶೇಕಡಾ ಹೆಚ್ಚಾಗಿದೆ, ಕಳೆದ ಡಿಸೆಂಬರ್‌ನಲ್ಲಿ 1.30 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top