News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಸ್ಪೋಟ: ಐವರಿಗೆ ಗಾಯ, ಮಗು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಡ್ಯಾಂಗ್ರಿ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಠ 5 ಜನರು ಗಾಯಗೊಂಡಿದ್ದಾರೆ ಮತ್ತು ಒಂದು ಮಗು ಮೃತಪಟ್ಟಿದೆ ಎಂದು ವರದಿಗಳು ತಿಳಿಸಿವೆ.

ಅಪ್ಪರ್ ಡ್ಯಾಂಗ್ರಿ ಗ್ರಾಮದಲ್ಲಿ ನಿನ್ನೆ ನಡೆದ  ಗುಂಡಿನ ದಾಳಿಗೆ ಬಲಿಯಾದವರ ಮನೆಯ ಬಳಿಯೇ ಇಂದು ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಮತ್ತೊಂದು ಐಇಡಿ ಪತ್ತೆಯಾಗಿದ್ದು, ಅದನ್ನು ವಿಫಲಗೊಳಿಸಲಾಗುತ್ತಿದೆ ಎಂದು ಜಮ್ಮು ಎಡಿಜಿಪಿ ಮುಖೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.

ಈ ನಡುವೆ, ಜಮ್ಮು ಮತ್ತು ಕಾಶ್ಮೀರ ಎಲ್‌ಜಿ ಮನೋಜ್ ಸಿನ್ಹಾ ರಜೌರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ ಮತ್ತು ದಾಳಿಯಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬ ನಾಗರಿಕರ  ಸಂಬಂಧಿಕರಿಗೆ 10 ಲಕ್ಷ ರೂಪಾಯಿ ಮತ್ತು ಸರ್ಕಾರಿ ಉದ್ಯೋಗವನ್ನು ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ರೂ.1 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top