News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ನಿಧನಕ್ಕೆ ಮೋದಿ ಸೇರಿದಂತೆ ಗಣ್ಯರ ಸಂತಾಪ

ಬೆಂಗಳೂರು: ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೋಮವಾರ ಲಿಂಗೈಕ್ಯರಾಗಿದ್ದು, ನಡೆದಾಡುವ ದೇವರ ಅಗಲುವಿಕೆ ಅಪಾರ ಭಕ್ತ ಸಮೂಹವನ್ನು ದುಃಖದ ಕಡಲಲ್ಲಿ ಮುಳುಗಿಸಿದೆ.

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು,  ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ.

ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು, ರಾಜ್ಯ ಮತ್ತು ಕೇಂದ್ರ ಸರಕಾರದ ಸಚಿವರು, ಶಾಸಕರು ಹಾಗು ಅಪಾರ ಭಕ್ತ ಸಮೂಹ ಈ ಸಂದರ್ಭದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಕಂಬನಿ ಮಿಡಿದ್ದಾರೆ.

“ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ” ಎಂದು ಮೋದಿ ಕನ್ನಡದಲ್ಲೇ ಟ್ವಿಟ್‌ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, “ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ” ಎಂದು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top