News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು ಇಂದು ವಿಜಯಪುರದ ಸೈನಿಕ ಶಾಲೆ ಆವರಣದಲ್ಲಿ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಶ್ರೀಗಳ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, “ಶ್ರೀಗಳ ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಬರುತ್ತಿದ್ದು ಹೀಗಾಗಿ ಸರ್ಕಾರಿ ಗೌರವದ ನಂತವೂ ಭಕ್ತರಿಗೆ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಹೀಗಾಗಿ ಭಕ್ತರು ಆತಂಕ ಪಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನು ಲಕ್ಷೋಪಾದಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಸರ್ಕಾರಿ ಗೌರವ ಮುಗಿದ ಮೇಲೆಯೂ ಭಕ್ತರಿಗೆ ದರ್ಶನ ವ್ಯವಸ್ಥೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ವಿವಿಧ ಮಠಾಧೀಶರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಚಿವರು, ಶಾಸಕರು ಹಾಗು ಅಪಾರ ಭಕ್ತರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ಬಳಿಕವೂ ಬದುಕುವುದೇ ಸಾರ್ಥಕತೆ. ಇಲ್ಲಿ ಸೇರಿರುವ ಜನಸಾಗರ ನೋಡಿದರೆ ಸಿದ್ದೇಶ್ವರ ಶ್ರೀಗಳ ಬದುಕು ಸಾರ್ಥಕ ಅನಿಸುತ್ತದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top