News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತ್ರಿಪುರಾದ ಮಾಜಿ ಸಿಎಂ ಬಿಪ್ಲಬ್‌ ದೇಬ್‌ ಮನೆಗೆ ಸಿಪಿಐಎಂ ಗೂಂಡಾಗಳಿಂದ ಬೆಂಕಿ

ನವದೆಹಲಿ: ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಅವರ ಪೂರ್ವಿಕರ ಮನೆಯ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ನಂತರ ಬೆಂಕಿ ಹಚ್ಚಿದ್ದಾರೆ. ಸಿಪಿಐಎಂ ಬೆಂಬಲಿತ ಗೂಂಡಾಗಳು ಈ ದುಷ್ಕೃತ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ

ಗೋಮತಿ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮನೆಗೆ ಬೆಂಕಿ ಹಚ್ಚುವ ಮುನ್ನ ದುಷ್ಕರ್ಮಿಗಳು ಮನೆಗೆ ನುಗ್ಗಿ ಹಲವಾರು ಕಿಟಕಿಗಳನ್ನು ಒಡೆದಿದ್ದಾರೆ.  ಬಿಪ್ಲಬ್ ದೇಬ್ ಅವರ ತಂದೆ ಹಿರುಧನ್ ದೇಬ್ ಅವರ ವಾರ್ಷಿಕ ಶ್ರಾದ್ಧ ಕಾರ್ಯಕ್ರಮದ ಒಂದು ದಿನ ಮುಂಚಿತವಾಗಿ ಈ ಘಟನೆ ನಡೆದಿದೆ. ಆದರೆ, ದಾಳಿಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ

ಹೋಮದ ಸಿದ್ಧತೆಗಳನ್ನು ಪರಿಶೀಲಿಸಲು ಮಾಜಿ ಸಿಎಂ ನಿವಾಸಕ್ಕೆ ಆಗಮಿಸಿದ್ದ ಅರ್ಚಕರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲಿದ್ದವರು ಮತ್ತು ಸ್ಥಳೀಯರು ಅರ್ಚಕರ ರಕ್ಷಣೆಗೆ ಧಾವಿಸಿದರು, ಆದರೆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ವಿಧ್ವಂಸಕ ಕೃತ್ಯದ ನಂತರ, ಸ್ಥಳೀಯ ಜನರು ಘಟನೆಯ ಬಗ್ಗೆ ಪ್ರತಿಭಟನೆ ನಡೆಸಿ ಶಂಕಿತ ದಾಳಿಕೋರರ  ಅಂಗಡಿಗಳನ್ನು ಧ್ವಂಸಗೊಳಿಸಿದ್ದಾರೆ. ಪರಿಸ್ಥಿತಿ ಅವಲೋಕಿಸಲು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಭಾರೀ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top