News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆ ಬೆಂಗಳೂರು-ಮೈಸೂರು ದಶಪಥ ಪರಿಶೀಲನೆಗೆ ರಾಜ್ಯಕ್ಕೆ ಗಡ್ಕರಿ

ಬೆಂಗಳೂರು:  ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಕಾಮಗಾರಿ ಪರಿಶೀಲನೆಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು  ನಡುವೆ ವಾಹನ ಸಂಚಾರ ಸುಗಮ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ದಶಪಥ ಹೆದ್ದಾರಿ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಈ ಕಾಮಗಾರಿ ಮುಕ್ತಾಯಗೊಳ್ಳಲಿದೆ.

ಈಗಾಗಲೇ ಈ ಕಾಮಗಾರಿ 88% ರಷ್ಟು ಮುಕ್ತಾಯಗೊಂಡಿದ್ದು ಶೀಘ್ರವೇ ವಾಹನ ಸಂಚಾರಕ್ಕೆ ಸಂಪೂರ್ಣ ರಸ್ತೆಯನ್ನು ಅನುವು ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಬೆಂಗಳೂರಿನ ಕೆಂಗೇರಿಯಿಂದ ಮಂಡ್ಯ ನಗರದ ಗಡಿಯವರೆಗೆ ಈ ಕಾಮಗಾರಿ ಬಹುತೇಕ ಕಂಪ್ಲೀಟ್ ಆಗಿದ್ದು, ಮಂಡ್ಯದಿಂದ ಮೈಸೂರುವರೆಗೆ ಭರದಿಂದ ಹೆದ್ದಾರಿ ಕಾಮಗಾರಿಯ ಕೆಲಸ ನಡೆಯುತ್ತಿದೆ. ಹೀಗಾಗಿ ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಾಳೆ ದಶಪಥ ಹೆದ್ದಾರಿಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ವೈಮಾನಿಕ ಸಮೀಕ್ಷೆಯ ಮೂಲಕ ಹೆದ್ದಾರಿ ಕಾಮಗಾರಿಯನ್ನು ಗಡ್ಕರಿ ಅವರು ವೀಕ್ಷಣೆ ಮಾಡಲಿದ್ದಾರೆ. ನಂತರ ರಸ್ತೆಯಲ್ಲಿ ಸಂಚಾರ ಮಾಡುವ ಮೂಲಕ ಹೆದ್ದಾರಿ ಕಾಮಗಾರಿಯ ಗುಣಮಟ್ಟವನ್ನು ಸಹ ಪರಿಶೀಲನೆ ನಡೆಸಲಿದ್ದಾರೆ. ಇನ್ನೂ ಬಾಕಿ ಉಳಿದಿರುವ ಕಾಮಗಾರಿಯನ್ನು ಎಷ್ಟು ದಿನಗಳ ಒಳಗೆ ಕಂಪ್ಲೀಟ್ ಆಗಬಹುದು ಎಂದು ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top