News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದಲ್ಲಿ ಶಿಶು ಮರಣ ಇಳಿಕೆಯಾಗಿದೆ, ಜನನ ಲಿಂಗಾನುಪಾತ ಏರಿದೆ: ಡಾ.ಸುಧಾಕರ್

ಬೆಂಗಳೂರು: ಕರ್ನಾಟಕದಲ್ಲಿ ನವಜಾತ ಶಿಶುಗಳ ಮರಣ ದರ ಶೇ.16ರಿಂದ 14ಕ್ಕೆ ಇಳಿಕೆಯಾಗಿದೆ. ಜನನ ಲಿಂಗಾನುಪಾತ 910ರಿಂದ 978ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ಅವರು ಹೇಳಿದ್ದಾರೆ.

2022ನೇ ವರ್ಷವು ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯದ ಸಮಗ್ರ ಅಭಿವೃದ್ಧಿಯ ವರ್ಷವಾಗಿದೆ ಎಂದಿರುವ ಅವರು, ಅನೇಕ ಸಾಧನೆಗಳ ಮಾಹಿತಿಯನ್ನು  ಹಂಚಿಕೊಂಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದು ಎಲ್ಲರಿಗೂ ಆರೋಗ್ಯದ ಹಕ್ಕು ನೀಡಲಾಗಿದೆ. ಕರ್ನಾಟಕವು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಆರೋಗ್ಯ ವಲಯದಲ್ಲಿ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ” ಎಂದಿದ್ದಾರೆ.

ರಾಜ್ಯದ ಜನನದ ಸಮಯದಲ್ಲಿ ಲಿಂಗಾನುಪಾತ 910 ರಿಂದ 978 ಕ್ಕೆ ಏರಿದೆ ಎಂದಿರುವ ಸಚಿವರು, ಶಿಶು ಮರಣ ದರ ಶೇ.16ರಿಂದ 14ಕ್ಕೆ ಇಳಿಕೆಯಾಗಿದೆ. ಹೆರಿಗೆಯಲ್ಲೂ ಸುಧಾರಣೆಯಾಗಿದ್ದು, 97% ರಷ್ಟು ಸಾಂಸ್ಥಿಕ ಹೆರಿಗೆಗಳು ದಾಖಲಾಗಿರುವುದು ಮಹತ್ವದ ಸಂಗತಿ ಎಂದಿದ್ದಾರೆ.

‘ಕಿವುಡ ಮುಕ್ತ ಕರ್ನಾಟ’ಉಪಕ್ರಮದಡಿ ನವಜಾತ ಶಿಶುಗಳಲ್ಲಿ ಶ್ರವಣದೋಷ ಪತ್ತೆ ಮಾಡಿ ಕಾಕ್ಲಿಯರ್ ಇಂಪ್ಲಾಂಟ್ ಅಳವಡಿಸಲಾಗುತ್ತಿದೆ. ಲಕ್ಷ್ಯ ಕಾರ್ಯಕ್ರಮದಡಿ 68% ಆಸ್ಪತ್ರೆಗಳಿಗೆ ಮಾನ್ಯತೆ ನೀಡಿ, 55 ಸೌಲಭ್ಯಗಳನ್ನು ರಾಷ್ಟ್ರ ಮಟ್ಟದಲ್ಲಿ ಪ್ರಮಾಣೀಕರಿಸಲಾಗಿದೆ ಎಂದಿದ್ದಾರೆ.

ಇ-ಸಂಜೀವಿನಿ ಟೆಲಿ-ಮೆಡಿಸಿನ್ ಸಮಾಲೋಚನೆಯಡಿ ದೇಶದಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಹೊರರೋಗಿ ಮಾದರಿಯ ಟೆಲಿ-ಸಮಾಲೋಚನೆಯಲ್ಲಿ ಮೊದಲ ಸ್ಥಾನದಲ್ಲಿದ್ದು, ನವೆಂಬರ್‌ವರೆಗೆ 61.99 ಲಕ್ಷ ಟೆಲಿ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top