News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ ಪರಿಶೀಲಿಸಿದ ಗಡ್ಕರಿ

ಬೆಂಗಳೂರು: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಇಂದು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

8 ಪಥಗಳ ಈ ಎಕ್ಸ್‌ಪ್ರೆಸ್ ವೇ ಕಾಮಗಾರಿಯ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ, ಕೋಲಾರದ ವಡಗಾನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿಯವರು, “2024ರ ಜನವರಿಯೊಳಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು” ಎಂದಿದ್ದಾರೆ.

ಕರ್ನಾಟಕ ಭಾಗದಲ್ಲಿನ ಹೆದ್ದಾರಿಯ ಕಾಮಗಾರಿ ಪೈಕಿ ಈಗಾಗಲೇ ಶೇ.34ರಷ್ಟು ಪೂರ್ಣಗೊಂಡಿದೆ. ಈ ಎಕ್ಸ್‌ಪ್ರೆಸ್ ವೇ ಲೋಕಾರ್ಪಣೆಗೊಂಡ ಬಳಿಕ, ಬೆಂಗಳೂರಿನಿಂದ 2.15 ಗಂಟೆಯಲ್ಲಿ ಚೆನ್ನೈಗೆ ಹೋಗಬಹುದು ಎಂದಿದ್ದಾರೆ.

ಈ ಪೂರ್ಣ ಎಕ್ಸ್‌ಪ್ರೆಸ್ ವೇಯನ್ನು ಸುಮಾರು 1700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಹಾದು ಹೋಗುವ ಹೆದ್ದಾರಿ ಉದ್ದ 71 ಕಿ.ಮೀ ಇದ್ದು, ಇದಕ್ಕಾಗಿ 5096 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಗಡ್ಕರಿ ವಿವರಿಸಿದ್ದಾರೆ.

ಇದೇ ವೇಳೆ, ಬೆಂಗಳೂರು ನಗರದಲ್ಲಿ ಟ್ರಾಫಿಕ್ ಕಡಿಮೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ತಿಳಿಸಿದ ಅವರು, ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಮಾಡಲಿದ್ದೇವೆ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top