News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ಮಣಿಪುರದಲ್ಲಿ 1,311 ಕೋಟಿ ರೂ ಅಭಿವೃದ್ಧಿ ಯೋಜನೆಗೆ ಅಮಿತ್‌ ಶಾ ಚಾಲನೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರಕ್ಕೆ ಎರಡು ದಿನಗಳ ಭೇಟಿಗಾಗಿ ನಿನ್ನೆ ಸಂಜೆ ಇಂಫಾಲಕ್ಕೆ ಆಗಮಿಸಿದ್ದಾರೆ. ಅವರು ಇಂದು ಬಿಷ್ಣುಪುರ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು 1,311 ಕೋಟಿ ರೂಪಾಯಿಗಳ 21 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಹ ನೆರವೇರಿಸಲಿದ್ದಾರೆ.

ಅಮಿತ್‌ ಶಾ ಇಂದು ಬೆಳಗ್ಗೆ ಹೀಂಗಾಂಗ್ ಗ್ರಾಮಕ್ಕೆ ಭೇಟಿ ನೀಡಲಿದ್ದು, ಮಾರ್ಜಿಂಗ್ ಪ್ರತಿಮೆ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ. ಅಲ್ಲಿ 122 ಅಡಿ ಎತ್ತರದ ಪೋಲೋ ಆಟಗಾರನ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ನಂತರ, ಮಣಿಪುರದ ಹಿಲ್ ಜಿಲ್ಲೆಯಲ್ಲಿ ತೆರೆಯಲಾದ ಮೊಟ್ಟಮೊದಲ ವೈದ್ಯಕೀಯ ಕಾಲೇಜನ್ನು ಉದ್ಘಾಟಿಸಲು  ಶಾ ಚುರಚಂದಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ನಂತರ ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಮೊಯಿರಾಂಗ್‌ನಲ್ಲಿರುವ ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್‌ಎ) ಪ್ರಧಾನ ಕಚೇರಿ ಸಂಕೀರ್ಣದಲ್ಲಿ 165 ಅಡಿ ಎತ್ತರದ ಭಾರತೀಯ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top