News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಾವೇರಿಯಲ್ಲಿ 3 ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭ

ಹಾವೇರಿ: ಹಾವೇರಿಯಲ್ಲಿ ಇಂದು 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ ಅವರು ಭುವನೇಶ್ವರಿ ದೇವಿಗೆ ಪೂಜೆ ನೆರವೇರಿಸಿದ ಬಳಿಕ ಅಕ್ಷರ ಜಾತ್ರೆಗೆ ಚಾಲನೆ ದೊರೆಯಿತು.

ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣ ಜಾಗದಲ್ಲಿ ಕನಕ-ಶರೀಫ-ಸರ್ವಜ್ಞ ವೇದಿಕೆ ಮುಂಭಾಗ ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣ ನೆರವೇರಿತು. ವಿವಿಧ ಕಲಾತಂಡಗಳು ಸಾಹಿತ್ಯ ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರುಗು ನೀಡಿದವು.

ಕನ್ನಡ ಸಾಹಿತ್ಯ ಪರಿಷತ್‌  ಜನವರಿ 6-8 ವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಿದೆ.

ನಿನ್ನೆ ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಸಮ್ಮೇಳನಾಧ್ಯಕ್ಷ ಡಾ ದೊಡ್ಡರಂಗೇಗೌಡ ಅವರು, ನಾನು ಎಡವೂ ಅಲ್ಲ, ಬಲವೂ ಅಲ್ಲ, ಕನ್ನಡ ಪಂಥೀಯ. ಕನ್ನಡವು ನಮ್ಮ ತಾಯಿ ಭಾಷೆಯಾಗಿದೆ. ನಮ್ಮೆದೆಗೆ ನಾಲ್ಕಕ್ಷರಗಳು ಬಿದ್ದರೆ ಬದುಕು ಬಂಗಾರವಾಗಲಿದೆ. ಜ್ಞಾನದ ಬೆಳಕಿನೆಡೆಗೆ ಹೋಗಲು ಸಾಧ್ಯವಾಗಲಿದೆ” ಎಂದಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause.