News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುಖ್ಯ ಕಾರ್ಯದರ್ಶಿಗಳ 2ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮೋದಿ ಭಾಗಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಇಂದು ಮಾತನಾಡಿದರು.

ಪ್ರಮುಖ ನೀತಿ ಸಂಬಂಧಿತ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ತಂಡದ ಉತ್ಸಾಹವನ್ನು ಬಲಪಡಿಸಲು ಇದು ಅದ್ಭುತ ವೇದಿಕೆಯಾಗಿದೆ ಎಂದು ಸಮ್ಮೇಳನದ ಬಗ್ಗೆ ಮೋದಿ ಹೇಳಿದ್ದಾರೆ.

ರಾಜ್ಯಗಳ ಸಹಭಾಗಿತ್ವದಲ್ಲಿ ತ್ವರಿತ ಮತ್ತು ನಿರಂತರ ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ಸಮ್ಮೇಳನವು ಕೇಂದ್ರೀಕೃತವಾಗಿದೆ.  ಕೇಂದ್ರ ಸರ್ಕಾರದ ಪ್ರತಿನಿಧಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಇತರ ಹಿರಿಯ ಅಧಿಕಾರಿಗಳು ಮತ್ತು ಡೊಮೇನ್ ತಜ್ಞರನ್ನು ಒಳಗೊಂಡ 200ಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗವಹಿಸಿದ್ದಾರೆ.

ಸಮ್ಮೇಳನದ ಸಮಯದಲ್ಲಿ MSMEಗಳು, ಮೂಲಸೌಕರ್ಯ ಮತ್ತು ಹೂಡಿಕೆಗಳು, ಅನುಸರಣೆಗಳನ್ನು ಕಡಿಮೆಗೊಳಿಸುವುದು, ಮಹಿಳಾ ಸಬಲೀಕರಣ, ಆರೋಗ್ಯ ಮತ್ತು ಪೋಷಣೆ ಮತ್ತು ಕೌಶಲ್ಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top