News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಒಂದು ವಾರಗಳ ಭಾರತ ಪ್ರವಾಸಕ್ಕೆ ಆಗಮಿಸಿದ ಸುರಿನಾಮ್‌ ಅಧ್ಯಕ್ಷೆ

ನವದೆಹಲಿ:  ಸುರಿನಾಮ್ ಅಧ್ಯಕ್ಷೆ ಚಂದ್ರಿಕಾ ಪ್ರಸಾದ್ ಸಂತೋಖಿ ಅವರು ಇಂದು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಜನವರಿ 14 ರವರೆಗೆ ಒಂದು ವಾರ ಭಾರತದಲ್ಲಿ ಇರಲಿದ್ದಾರೆ.

ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿ ಆಯೋಜನೆಗೊಂಡಿರುವ ಪ್ರವಾಸಿ ಭಾರತೀಯ ದಿವಸ್ ಸಮಾವೇಶ 2023 ರಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅವರು ಇಂದು ಗುಜರಾತ್‌ನ ಜಾಮ್‌ನಗರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ನಂತರ ಅವರು ಇಂದೋರ್‌ಗೆ ಪ್ರಯಾಣಿಸಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಜನವರಿ 8 ರಂದು ಸುರಿನಾಮ್ ಅಧ್ಯಕ್ಷರನ್ನು ಭೇಟಿಯಾಗಲಿದ್ದಾರೆ.

ಸಂತೋಖಿ ಅವರು ಜನವರಿ 9 ರಂದು ಪ್ರವಾಸಿ ಭಾರತೀಯ ದಿವಸ್ ಸಮಾವೇಶ 2023 ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಮತ್ತು ಸಮಾರಂಭದಲ್ಲಿ ಭಾಷಣವನ್ನೂ ಮಾಡಲಿದ್ದಾರೆ. ಆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಜನವರಿ 10 ರಂದು ಸಂತೋಖಿ ಅವರನ್ನು ಭೇಟಿಯಾಗಲಿದ್ದಾರೆ.

ಜನವರಿ 11 ರಂದು ಸುರಿನಾಮ್ ಅಧ್ಯಕ್ಷರು ಕಲ್ಮಿನೇಷನ್ ಕಾರ್ಯಕ್ರಮ ಮತ್ತು ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 12 ರಂದು ಅವರು  ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಅಹಮದಾಬಾದ್‌ಗೆ ಭೇಟಿ ನೀಡಲಿದ್ದಾರೆ ಮತ್ತು ಮರುದಿನ ಜನವರಿ 13 ರಂದು ಇನ್ನೂ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರು ಜನವರಿ 14 ರಂದು ಭಾರತವನ್ನು ತೊರೆಯಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top