News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2024ರ ಜ.14ರಂದು ಅಯೋಧ್ಯೆಯಲ್ಲಿ ರಾಮ ಲಲ್ಲಾ ವಿಗ್ರಹ ಪ್ರತಿಷ್ಠಾಪನೆ: ಚಂಪತ್‌ ರಾಯ್

ನವದೆಹಲಿ: ಅಯೋಧ್ಯೆ ರಾಮ ಮಂದಿರದ ನಿರ್ಮಾಣವನ್ನು  ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲಾಗುವುದು ಮತ್ತು ಜನವರಿ 14, 2024 ರಂದು ರಾಮ ಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಶುಕ್ರವಾರ ಹೇಳಿದ್ದಾರೆ.

ಮುಂದಿನ ವರ್ಷ ಜನವರಿ 1 ರೊಳಗೆ ಅಯೋಧ್ಯೆಯಲ್ಲಿ ರಾಮಮಂದಿರ ಸಿದ್ಧವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ ಒಂದು ದಿನದ ನಂತರ ಅವರ ಹೇಳಿಕೆಗಳು ಬಂದಿವೆ.

ಯೋಜನೆಯ ಪ್ರಕಾರ 2024 ರ ಮಕರ ಸಂಕ್ರಾಂತಿಯಂದು  ದೇವಾಲಯದ ಗರ್ಭಗುಡಿಯಲ್ಲಿ ರಾಮ ಲಲ್ಲಾನ ವಿಗ್ರಹವನ್ನು ಸ್ಥಾಪಿಸಲಾಗುವುದು. ಆ ವೇಳೆಗೆ ಗರ್ಭಗುಡಿಯ ನಿರ್ಮಾಣ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

“ನಾವು ಮಂದಿರ ನಿರ್ಮಾಣಕ್ಕೆ ಡಿಸೆಂಬರ್ 2023 ಮತ್ತು ಅದನ್ನು ಭಕ್ತರಿಗೆ ತೆರೆಯಲು ಜನವರಿ 2024 ಅನ್ನು ಗಡುವು ಎಂದು ನಿಗದಿಪಡಿಸಿದ್ದೇವೆ” ಎಂದು ರಾಯ್‌ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5, 2020 ರಂದು ಮಂದಿರ ನಿರ್ಮಾಣಕ್ಕಾಗಿ ‘ಭೂಮಿ ಪೂಜೆ’ ನೆರವೇರಿಸಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top