News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದಿನಿಂದ ಜಾತಿ ಸಮೀಕ್ಷೆ ಆರಂಭಿಸಿದ ಬಿಹಾರ

ಪಾಟ್ನಾ: ಬಿಹಾರ ಸರ್ಕಾರ ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಜಾತಿ ಸಮೀಕ್ಷೆಯನ್ನು ಆರಂಭಿಸಿದೆ. ಪ್ರತಿ ಕುಟುಂಬದ ಆರ್ಥಿಕ ಸ್ಥಿತಿಯೊಂದಿಗೆ ಜಾತಿಗಳನ್ನು ಮಾತ್ರ ಪಟ್ಟಿ ಮಾಡಲಾಗುವುದು, ಆದರೆ ಉಪ ಜಾತಿಗಳನ್ನು ಪಟ್ಟಿ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಗಣತಿದಾರರು ರಾಜ್ಯದ ಹೊರಗೆ ವಾಸಿಸುವ ಜನರೊಂದಿಗೂ ಸಂಪರ್ಕ ಸಾಧಿಸಲಿದ್ದಾರೆ ಎಂದು ಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರತಿ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸಮೀಕ್ಷೆಯಲ್ಲಿ ಸರಿಯಾಗಿ ನಮೂದಿಸಲಾಗುವುದು, ಜಾತಿ ಸಮೀಕ್ಷೆಯು ವಂಚಿತ ವರ್ಗಗಳ ಅಭ್ಯುದಯಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ವಿವರಿಸಿದ್ದಾರೆ.

ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಮನೆಗಳ ಸಂಖ್ಯೆಯನ್ನು ಎಣಿಕೆ ಮಾಡಲಾಗುತ್ತದೆ ಮತ್ತು ದಾಖಲಿಸಲಾಗುತ್ತದೆ.

ಏಪ್ರಿಲ್ 1 ರಿಂದ 30 ರವರೆಗೆ ಪ್ರಾರಂಭವಾಗುವ ಎರಡನೇ ಹಂತದ ಸಮೀಕ್ಷೆಯಲ್ಲಿ ಮನೆಗಳಲ್ಲಿ ವಾಸಿಸುವ ಜನರು, ಅವರ ಜಾತಿಗಳು ಮತ್ತು ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳನ್ನು ಸಂಗ್ರಹಿಸಲಾಗುತ್ತದೆ. ಸಮೀಕ್ಷೆಯು ಮೇ 31, 2023 ರಂದು ಕೊನೆಗೊಳ್ಳುತ್ತದೆ. ಸುಮಾರು ಐದು ಲಕ್ಷ ಜನರು ಸಂಪೂರ್ಣ ಗಣತಿ ಪ್ರಕ್ರಿಯೆಯಲ್ಲಿ  ತೊಡಗಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರವು 500 ಕೋಟಿ ರೂಪಾಯಿಗಳನ್ನು ಇದಕ್ಕಾಗಿ ಖರ್ಚು ಮಾಡಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top