News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2024ರ ವೇಳೆಗೆ ದೇಶವನ್ನು ನಕ್ಸಲ್ ಮುಕ್ತಗೊಳಿಸುವ ಗುರಿ: ಅಮಿತ್‌ ಶಾ

ರಾಯ್ಪುರ: 2024ರ ಲೋಕಸಭೆ ಚುನಾವಣೆಗೂ ಮುನ್ನ ದೇಶವನ್ನು ನಕ್ಸಲ್ ಮುಕ್ತಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಹೇಳಿದ್ದಾರೆ.

ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಮಾವೋವಾದಿ ಹಿಂಸಾಚಾರದ ಘಟನೆಗಳ ಸಂಖ್ಯೆ 2009 ರಲ್ಲಿ 2,258 ರಿಂದ 2021 ರಲ್ಲಿ 509 ಕ್ಕೆ ಇಳಿದಿದೆ ಎಂದು ಹೇಳಿದರು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ನಡೆದಿರುವ ಏಕೈಕ ಪ್ರಗತಿಯೆಂದರೆ ಅಪರಾಧ ಮತ್ತು ಭ್ರಷ್ಟಾಚಾರದ ಹೆಚ್ಚಳವಾಗಿದೆ ಎಂದು ಕಾಂಗ್ರೆಸ್‌ ನೇತೃತ್ವ ಭೂಪೇಶ್‌ ಭಾಗೆಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಛತ್ತೀಸ್‌ಗಢಸದ ಕೊರ್ಬಾ, ಮನೇಂದ್ರಗಢ, ಕೊರಿಯಾ ಮತ್ತು ಗೌರೆಲ್ಲಾ-ಪೇಂದ್ರ-ಮಾರ್ವಾಹಿ ಜಿಲ್ಲೆಗಳ ಸುಮಾರು 50,000 ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top