News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬ್ರೆಝಿಲ್‌ನಲ್ಲಿ ದಂಗೆ: ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ: ಬ್ರೆಜಿಲ್‌ನ ರಾಜಧಾನಿ ಬ್ರೆಸಿಲಿಯಾದಲ್ಲಿ ಸರಕಾರಿ ಸಂಸ್ಥೆಗಳ ಮೇಲೆ ನೂರಾರು ದಂಗೆಕೋರರು ದಾಳಿ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಜಾಗತಿಕ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ಬ್ರೆಸಿಲಿಯಾದಲ್ಲಿ ಸರ್ಕಾರಿ ಸಂಸ್ಥೆಗಳ ವಿರುದ್ಧ ಗಲಭೆ ಮತ್ತು ವಿಧ್ವಂಸಕ ಸುದ್ದಿಗಳ ಬಗ್ಗೆ ತೀವ್ರ ಕಳವಳವಿದೆ. ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ನಾವು ಬ್ರೆಜಿಲ್ ಅಧಿಕಾರಿಗಳಿಗೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ” ಎಂದು ಮೋದಿ ಟ್ವಿಟ್‌ ಮಾಡಿದ್ದಾರೆ.

ಭಾನುವಾರ, ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಬೆಂಬಲಿಗರು  ಭದ್ರತೆ ಉಲ್ಲಂಘಿಸಿ ಬ್ರೆಜಿಲ್‌ನ ಕಾಂಗ್ರೆಸ್, ಸುಪ್ರೀಂಕೋರ್ಟ್ ಮತ್ತು ಪ್ಲಾನಾಲ್ಟೊ ಅಧ್ಯಕ್ಷೀಯ ಅರಮನೆಯನ್ನು ಪ್ರವೇಶಿಸಿದರು ಎಂದು ಬ್ರೆಜಿಲ್ ಮಾಧ್ಯಮಗಳು ವರದಿ ಮಾಡಿವೆ.

ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಬ್ರೆಜಿಲ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬೋಲ್ಸನಾರೊ ಅವರ ಬೆಂಬಲಿಗರು ಬ್ರೆಸಿಲಿಯಾದಲ್ಲಿ ದಂಗೆ ಎದ್ದಿದ್ದಾರೆ ಮಾಡುತ್ತಿದ್ದಾರೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ದಂಗೆಕೋರರ ಕೃತ್ಯವನ್ನು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್‌, ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಅನೇಕರು ಖಂಡಿಸಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top