ನವದೆಹಲಿ: ಸೋಮವಾರ ಇಂದೋರ್ನಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್ ಸಮಾವೇಶದ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಯಾನಾ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಅಲಿ ಮತ್ತು ಸುರಿನಾಮ್ ಅಧ್ಯಕ್ಷ ಚಂದ್ರಿಕಾ ಪ್ರಸಾದ್ ಸಂತೋಖಿ ಅವರೊಂದಿಗೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಗಯಾನಾ ಮತ್ತು ಸುರಿನಾಮ್ ಅಧ್ಯಕ್ಷರು ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಭಾರತಕ್ಕೆ ಆಗಮಿಸಿದ್ದಾರೆ. ಅವರನ್ನು ಸಮಾವೇಶದಲ್ಲಿ ಅಭಿನಂದಿಸಲಾಗಿದೆ. ಮಹಮದ್ ಇರ್ಫಾನ್ ಅಲಿ ಮುಖ್ಯ ಅತಿಥಿಯಾಗಿ ಹಾಗೂ ಚಂದ್ರಿಕಾ ಪ್ರಸಾದ್ ಸಂತೋಖಿ ವಿಶೇಷ ಅತಿಥಿಗಳಾಗಿ ಆಗಮಿಸಿದ್ದಾರೆ. ಇಬ್ಬರೂ ಭಾರತೀಯ ಮೂಲದ ವ್ಯಕ್ತಿಗಳಾಗಿದ್ದು, ಅವರ ಅತ್ಯುತ್ತಮ ಸಾಧನೆಗಳಿಗಾಗಿ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಗಯಾನಾ ಅಧ್ಯಕ್ಷರು ಇಂಧನ, ಮೂಲಸೌಕರ್ಯ ಅಭಿವೃದ್ಧಿ, ಔಷಧೀಯ, ಆರೋಗ್ಯ, ತಂತ್ರಜ್ಞಾನ ಮತ್ತು ನಾವೀನ್ಯತೆ ಮತ್ತು ರಕ್ಷಣಾ ಸಹಕಾರದಂತಹ ವಿಷಯಗಳ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ವ್ಯಾಪಕ ಚರ್ಚೆ ನಡೆಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಗಯಾನಾ ಮತ್ತು ಸುರಿನಾಮ್ ಅಧ್ಯಕ್ಷರು ಕೋವಿಡ್-19 ಉಲ್ಬಣಗೊಂಡ ಸಮಯದಲ್ಲಿ ತಮ್ಮ ರಾಷ್ಟ್ರಗಳಿಗೆ ಸಹಾಯ ಮಾಡಿದ್ದಕ್ಕಾಗಿ ಭಾರತವನ್ನು ಶ್ಲಾಘಿಸಿದ್ದಾರೆ.
Had an excellent meeting with President @CSantokhi. We reviewed the full range of relations between India and Suriname. We discussed avenues of cooperation in futuristic areas like innovation, technology, maritime security and more. 🇮🇳 🇸🇷 pic.twitter.com/FelHqTHWmk
— Narendra Modi (@narendramodi) January 9, 2023
India has been leading the way on technology, renewable energy, the soil movement, sustainable development, and I'm just very keen on looking at the different models that India would have utilized in building its economy: Mohamed Irfaan Ali, President of Guyana (09.01) pic.twitter.com/fv9C2NOScy
— ANI (@ANI) January 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.