News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜ.12ರಂದು ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: 26 ನೇ ರಾಷ್ಟ್ರೀಯ ಯುವಜನೋತ್ಸವವು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಜನವರಿ 12 ರಿಂದ 16 ರವರೆಗೆ ನಡೆಯಲಿದೆ.

ನವದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಈ ವರ್ಷದ ಯುವಜನೋತ್ಸವದ ಥೀಮ್ ‘ವಿಕಸಿತ್ ಯುವ, ವಿಕಾಸ್ ಭಾರತ್’ ಎಂದು ಹೇಳಿದರು.

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಜನವರಿ 12 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುವ ಉತ್ಸವ-2023 ಅನ್ನು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.

ದೇಶದಾದ್ಯಂತ 7,500 ಯುವ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಾಂಪ್ರದಾಯಿಕ ಆಟಗಳಾದ ಕಲರಿಪಯಟು, ತಂಗ್ಟಾ, ಗಟ್ಕಾ, ಮಲ್ಲಕಂಬ ಮತ್ತು ಯೋಗಾಸನಗಳು ಉತ್ಸವದ ಭಾಗವಾಗಿರುತ್ತವೆ ಎಂದು ಮಾಹಿತಿ ನೀಡಿದ್ದಾರೆ.

ಯುವ ಕುಶಲಕರ್ಮಿಗಳಿಗೆ ತಮ್ಮ ಕಲೆ ಮತ್ತು ಕರಕುಶಲತೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲು ಸಾಮಾಜಿಕ ಅಭಿವೃದ್ಧಿ ಮೇಳ – ಯುವ ಕೃತಿ ಮತ್ತು ಆಹಾರೋತ್ಸವವನ್ನು ಆಯೋಜಿಸಲಾಗುವುದು ಎಂದರು.

ಜಿ-20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವುದು ಭಾರತಕ್ಕೆ ಉತ್ತಮ ಕ್ಷಣವಾಗಿದೆ ಎಂದು ಸಚಿವರು, ಇದರ ಅಡಿಯಲ್ಲಿ ದೇಶದಾದ್ಯಂತ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಯುವ ಮಾತುಕತೆಗಳನ್ನು ನಡೆಸಲಾಗುವುದು. ಮಾತುಕತೆಯ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ, ಹವಾಮಾನ ಬದಲಾವಣೆ, ನೀರು ಮತ್ತು ಇಂಧನ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top