News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

‘ಆರ್‌ಆರ್‌ಆರ್’ ಸಿನಿಮಾದ ‘ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್‌ ಪ್ರಶಸ್ತಿ

ನವದೆಹಲಿ: ಎಸ್.ಎಸ್.ರಾಜಮೌಳಿ ಅವರ ‘ಆರ್‌ಆರ್‌ಆರ್’ ಸಿನಿಮಾದ ‘ನಾಟು ನಾಟು’ ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಗೋಲ್ಡನ್ ಗ್ಲೋಬ್‌ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಕಳೆದ ವರ್ಷ 2022ರಲ್ಲಿ ಈ ಸಿನಿಮಾ ತೆರೆ ಕಂಡು ಅದ್ಭುತವಾಗಿ ಪ್ರದರ್ಶನಗೊಂಡಿತ್ತು.

ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಈ ಸಿನಿಮಾ ‘ಅತ್ಯುತ್ತಮ ಇಂಗ್ಲೀಷೇತರ ಚಿತ್ರ’ ವಿಭಾಗದಲ್ಲೂ ನಾಮನಿರ್ದೇಶನಗೊಂಡಿದೆ. ಚಿತ್ರದಲ್ಲಿ ತೆಲುಗು ಹಾಡು “ನಾಟು ನಾಟು” ಅನ್ನು ಹಿರಿಯ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಯೋಜಿಸಿದ್ದಾರೆ, ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಸಾಹಿತ್ಯ ಬರೆದಿದ್ದಾರೆ.

ಸಮಾರಂಭದಲ್ಲಿ ಸಂಗೀತ ನಿರ್ದೇಶಕ ಕೀರವಾಣಿ ಪ್ರಶಸ್ತಿಯನ್ನು ಸ್ವೀಕರಿಸಿ ಸಂಭ್ರಮಿಸಿದ್ದಾರೆ .

RRR 1920 ರ ದಶಕದಲ್ಲಿ ಇಬ್ಬರು ಭಾರತೀಯ ಕ್ರಾಂತಿಕಾರಿಗಳಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮರಂ ಭೀಮ್ -ಸುತ್ತ ಹೆಣೆದ ಸ್ವಾತಂತ್ರ್ಯ ಪೂರ್ವದ ಕಾಲ್ಪನಿಕ ಕಥೆಯಾಗಿದೆ. ಚಿತ್ರದಲ್ಲಿ ರಾಮ್ ಚರಣ್, ಜೂನಿಯರ್ ಎನ್‌ಟಿಆರ್, ಆಲಿಯಾ ಭಟ್ ಮತ್ತು ಅಜಯ್ ದೇವಗನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಥಿಯೇಟರ್‌ನಲ್ಲಿ ಬಿಡುಗಡೆಯಾದ “RRR” ಜಾಗತಿಕ ಮಟ್ಟದಲ್ಲಿ ಬಾಕ್ಸ್ ಆಫೀಸ್‌ನಲ್ಲಿ 1,200 ಕೋಟಿ ರೂಪಾಯಿಗಳನ್ನು ಗಳಿಸಿತ್ತು.

ಗೋಲ್ಡನ್ ಗ್ಲೋಬ್ ನಲ್ಲಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಗೆ ಆರ್ ಆರ್ ಆರ್‌ಗೆ ಸಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top