News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತಷ್ಟು ಚೀತಾಗಳು ಬರಲಿವೆ: ಮಧ್ಯಪ್ರದೇಶ ಸಿಎಂ

ನವದೆಹಲಿ: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಶೀಘ್ರದಲ್ಲೇ ಮತ್ತಷ್ಟು ಚೀತಾಗಳು ಆಗಮಿಸಲಿವೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌವ್ಹಾನ್‌ ಹೇಳಿದ್ದಾರೆ.

ಇಂದೋರ್‌ನಲ್ಲಿ ಮಂಗಳವಾರ ನಡೆದ ಪ್ರವಾಸಿ ಭಾರತೀಯ ದಿವಸ್ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಚೌಹಾಣ್, “ಫೆಬ್ರವರಿಯಲ್ಲಿ ಚಿರತೆಗಳನ್ನು ನೋಡಲು ನಾನು ನಿಮ್ಮನ್ನು ಕರೆಯುತ್ತೇನೆ. ನಾವು ಫೆಬ್ರವರಿಯಿಂದ ಚೀತಾಗಳನ್ನು ನೋಡಲು ಪ್ರವಾಸಿಗರಿಗೆ ಅವಕಾಶ ನೀಡುತ್ತೇವೆ” ಎಂದು ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು ನಮೀಬಿಯಾದಿಂದ ಚೀತಾಗಳನ್ನು ಆಮದು ಮಾಡಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಹೆಚ್ಚಿನ ಚೀತಾಗಳು ಕುನೋ ಉದ್ಯಾನವನಕ್ಕೆ ಬರುತ್ತಿವೆ” ಎಂದು ಚೌಹಾಣ್ ಹೇಳಿದ್ದಾರೆ.

ಮಧ್ಯಪ್ರದೇಶದ ಹುಲಿ ಸಂರಕ್ಷಿತ ಪ್ರದೇಶಗಳು ಸೇರಿದಂತೆ ಪ್ರವಾಸಿ ತಾಣಗಳಿಗೆ  ಭೇಟಿ ನೀಡುವಂತೆ ಅವರು  ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅನಿವಾಸಿ ಭಾರತೀಯರಿಗೆ ಕರೆ ನೀಡಿದ್ದಾರೆ. ಅನಿವಾಸಿ ಭಾರತೀಯರು ಮಧ್ಯಪ್ರದೇಶ ಮತ್ತು ಭಾರತದ ಇತರ ಭಾಗಗಳ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯವಾಣಿಯನ್ನು ಸ್ಥಾಪಿಸಬೇಕು ಎಂದೂ ಅವರು ಈ ವೇಳೆ ಮನವಿ ಮಾಡಿದ್ದಾರೆ.

ದೇಶದಲ್ಲಿ ಅಳಿವಿನಂಚಿನಲ್ಲಿರುವ ಚೀತಾಗಳ ಸಂಖ್ಯೆಯನ್ನು ಪುನರುಜ್ಜೀವನಗೊಳಿಸುವ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಎಂಟು ಚೀತಾಗಳನ್ನು ಉದ್ಯಾನವನಕ್ಕೆ ತಂದು ಬಿಡಲಾಗಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top