ನವದೆಹಲಿ: ಗೋಲ್ಡನ್ ಗ್ಲೋಬ್ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ಎಸ್ ಎಸ್ ರಾಜಮೌಳಿ ಅವರ ನಿರ್ದೇಶನದ ಆರ್ಆರ್ಆರ್ ಸಿನಿಮಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಆರ್ಆರ್ಆರ್ ಸಿನಿಮಾದ ʼನಾಟು ನಾಟು ಹಾಡಿಗೆ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ ಒಲಿದು ಬಂದಿದೆ.
ತೆಲುಗು ಹಾಡು “ನಾಟು ನಾಟು” ಅನ್ನು ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಬರೆದಿದ್ದಾರೆ ಮತ್ತು ಹಿರಿಯ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಯೋಜಿಸಿದ್ದಾರೆ. ಹಾಡಿಗೆ ನಟರಾದ ಜೂನಿಯರ್ ಎನ್ಟಿಆರ್ ಮತ್ತು ರಾಮ್ ಚರಣ್ ಹೆಜ್ಜೆ ಹಾಕಿದ್ದಾರೆ.
ಈ ಪ್ರತಿಷ್ಠಿತ ಗೌರವವು ಭಾರತೀಯರಿಗೆ ಅತೀವ ಹೆಮ್ಮೆ ತಂದಿದೆ ಎಂದು ಮೋದಿ ಹೇಳಿದ್ದಾರೆ.
ಮೋದಿ ಮಾತ್ರವಲ್ಲದೇ ಗಣ್ಯಾತಿಗಣ್ಯರು ಆರ್ಆರ್ಆರ್ ಸಿನಿಮಾ ತಂಡದ ಸಾಧನೆಗೆ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ.
A very special accomplishment! Compliments to @mmkeeravaani, Prem Rakshith, Kaala Bhairava, Chandrabose, @Rahulsipligunj. I also congratulate @ssrajamouli, @tarak9999, @AlwaysRamCharan and the entire team of @RRRMovie. This prestigious honour has made every Indian very proud. https://t.co/zYRLCCeGdE
— Narendra Modi (@narendramodi) January 11, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.