ನವದೆಹಲಿ: ಭಾರತಕ್ಕೆ ಆಗಮಿಸಿರುವ ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಾಸಿಂಘೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸಿದರು.
ಮಾತುಕತೆಯ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇಬ್ಬರು ಮುಖಂಡರು, ಭಾರತ-ಶ್ರೀಲಂಕಾ ನಡುವಣ ಬಾಂಧವ್ಯವನ್ನು ಗಟ್ಟಿಗೊಳಿಸುವ ಭರವಸೆ ನೀಡಿದರು.
‘ಆತ್ಮೀಯ ನೆರೆಯ ಮತ್ತು ಸ್ನೇಹಿತ ಶ್ರೀಲಂಕಾಗೆ ಪ್ರತಿ ಹಂತದಲ್ಲೂ ಯಶಸ್ಸು ಸಿಗಲಿ, ಪ್ರಗತಿಯನ್ನು ಕಾಣಲಿ ಎಂದು ಆಶಿಸುತ್ತೇನೆ’ ಎಂದು ಮೋದಿ ಹೇಳಿದರು. ಅಲ್ಲದೇ ಉಭಯ ದೇಶಗಳ ಬಾಂಧವ್ಯ ವೃದ್ಧಿಗೆ ಶ್ರಮಿಸುತ್ತಿರುವುದಕ್ಕಾಗಿ ವಿಕ್ರಮಸಿಂಘೆಗೆ ಧನ್ಯವಾದಗಳನ್ನು ಅರ್ಪಿಸಿದರು.
ಅಧಿಕಾರಕ್ಕೇರಿದ ಬಳಿಕ ವಿಕ್ರಮಸಿಂಘೆಯ ನಾಲ್ಕನೇ ವಿದೇಶಿ ಭೇಟಿ ಇದಾಗಿದ್ದು, ಸೋಮವಾರ ಅವರು ನವದೆಹಲಿಗೆ ಬಂದಿಳಿದಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.