News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರುಪೇ ಡೆಬಿಟ್ ಕಾರ್ಡ್‌, ಕಡಿಮೆ ಮೌಲ್ಯದ UPI ವಹಿವಾಟು ಉತ್ತೇಜನಕ್ಕೆ ರೂ.2,600 ಕೋಟಿ ಯೋಜನೆ: ಸಂಪುಟ ಅಸ್ತು

ನವದೆಹಲಿ: ವಿತ್ತವರ್ಷ 2023 ರಲ್ಲಿ ರುಪೇ ಡೆಬಿಟ್ ಕಾರ್ಡ್ ಮತ್ತು ಕಡಿಮೆ ಮೌಲ್ಯದ BHIM-UPI ವಹಿವಾಟುಗಳನ್ನು (ವ್ಯಕ್ತಿಯಿಂದ ವ್ಯಾಪಾರಿ) ಉತ್ತೇಜಿಸಲು ರೂ 2,600 ಕೋಟಿ ಪ್ರೋತ್ಸಾಹಕ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಭೂಪೇಂದರ್ ಯಾದವ್, ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು BHIM ಯುಪಿಐ ಬಳಕೆಗೆ ಈ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಯೋಜನೆಯಡಿಯಲ್ಲಿ, ಪ್ರಸಕ್ತ ಹಣಕಾಸು ವರ್ಷದಲ್ಲಿ ರುಪೇ ಮತ್ತು ಯುಪಿಐ ಬಳಸಿ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಮತ್ತು ಇ-ಕಾಮರ್ಸ್ ವಹಿವಾಟುಗಳನ್ನು ಉತ್ತೇಜಿಸಲು ಬ್ಯಾಂಕ್‌ಗಳಿಗೆ ಆರ್ಥಿಕ ಪ್ರೋತ್ಸಾಹವನ್ನು ನೀಡಲಾಗುತ್ತದೆ.

ಕಳೆದ ವರ್ಷ ತಮ್ಮ ಬಜೆಟ್ ಭಾಷಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡಿಜಿಟಲ್ ಪಾವತಿಗೆ ಹಣಕಾಸು ಬೆಂಬಲವನ್ನು ಮುಂದುವರಿಸುವ ಸರ್ಕಾರದ ಉದ್ದೇಶವನ್ನು ಘೋಷಿಸಿದ್ದರು. ಈ ಘೋಷಣೆಗೆ ಅನುಗುಣವಾಗಿ  ಯೋಜನೆಯನ್ನು ರೂಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರಫ್ತು, ಸಾವಯವ ಉತ್ಪನ್ನಗಳು ಮತ್ತು ಬೀಜಗಳನ್ನು ಉತ್ತೇಜಿಸಲು ಮೂರು ಹೊಸ ಸಹಕಾರಿ ಸಂಸ್ಥೆಗಳನ್ನು ಸ್ಥಾಪಿಸುವ ಯೋಜನೆಗೂ ಸಂಪುಟ ಸಮಿತಿ ಅನುಮೋದನೆ ನೀಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top