News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇದುವರೆಗೆ 22.2 ಕೋಟಿಗೂ ಅಧಿಕ ಆಯುಷ್ಮಾನ್ ಕಾರ್ಡ್‌ಗಳ ವಿತರಣೆ

ನವದೆಹಲಿ: ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಇದುವರೆಗೆ 22 ಕೋಟಿ 20 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್‌ಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2018 ರಲ್ಲಿ ಪ್ರಾರಂಭಿಸಿದರು. ಜನರಿಗೆ ಆರೋಗ್ಯ ರಕ್ಷಣೆ ಒದಗಿಸುವ ಮಹತ್ವದ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ವಿಶ್ವದ ಅತಿದೊಡ್ಡ ಆರೋಗ್ಯ ಕಾರ್ಯಕ್ರಮವಾಗಿರುವ ಈ ಯೋಜನೆಯು ದುರ್ಬಲ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂಪಾಯಿಗಳ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ ಎಂದು ಟ್ವೀಟ್‌ನಲ್ಲಿ ಡಾ.ಮಾಂಡವಿಯಾ ಹೇಳಿದ್ದಾರೆ.

ಈ ಯೋಜನೆಯು ದೇಶದಾದ್ಯಂತ ಹತ್ತು ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top