News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

651 ಜಿಲ್ಲೆಗಳಲ್ಲಿ ಹೊಸ ಜನೌಷಧಿ ಕೇಂದ್ರ ತೆರೆಯಲು ಆನ್‌ಲೈನ್‌ ಅರ್ಜಿ ಆಹ್ವಾನ

ನವದೆಹಲಿ: ದೇಶದ ವಿವಿಧ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳ 651 ಜಿಲ್ಲೆಗಳಲ್ಲಿ ಹೊಸ ಜನೌಷಧಿ ಕೇಂದ್ರಗಳನ್ನು ತೆರೆಯಲು ಫಾರ್ಮಸಿಸ್ಟ್‌ಗಳಿಂದ ಸರ್ಕಾರ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಿ ಅವಕಾಶ ಪಡೆದುಕೊಳ್ಳಬಹುದಾಗಿದೆ.

ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಎಲ್ಲರಿಗೂ ಕೈಗೆಟಕುವ ಬೆಲೆಯಲ್ಲಿ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ (PMBJP) ಅನ್ನು ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ಫಾರ್ಮಾಸ್ಯುಟಿಕಲ್ಸ್ ಇಲಾಖೆಯು ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ, ದೇಶಾದ್ಯಂತ ಈಗಾಗಲೇ 9000 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಜನೌಷಧಿ ಕೇಂದ್ರಗಳಲ್ಲಿ 1759 ಔಷಧಗಳು ಮತ್ತು 280 ಶಸ್ತ್ರಚಿಕಿತ್ಸಾ ಸಾಧನಗಳನ್ನು ಪ್ರಸ್ತುತ ಮಾರಾಟ ಮಾಡಲಾಗುತ್ತಿದೆ. ಮಾರ್ಚ್ 2024 ರ ವೇಳೆಗೆ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ಕ್ಕೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಈ ಉದ್ದೇಶದೊಂದಿಗೆ, ವಿವಿಧ ರಾಜ್ಯಗಳು/ಕೇಂದ್ರಾಡಳಿತದ 651 ಜಿಲ್ಲೆಗಳಲ್ಲಿ ಹೊಸ ಜನೌಷಧಿ ಕೇಂದ್ರಗಳನ್ನು ತೆರೆಯಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲು ಯೋಜನೆಯ ಅನುಷ್ಠಾನ ಸಂಸ್ಥೆಯಾದ ಫಾರ್ಮಾಸ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾದ  ಪ್ರಸ್ತಾವನೆಯನ್ನು ಸರ್ಕಾರವು ಅನುಮೋದಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top