News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹುಬ್ಬಳ್ಳಿ: 29ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಮೋದಿ ಚಾಲನೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 29ನೇ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಿದ್ದಾರೆ.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಯುವ ಸಮುದಾಯ ಎಲ್ಲಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಯುವ ಪ್ರತಿಭೆಗಳು ಅಸಾಧಾರಣ ಸಾಧನೆ ಮಾಡುತ್ತಿದ್ದು, ಭಾರತೀಯ ಯುವ ಸಮುದಾಯವು ತನ್ನ ನಂಬಲಸಾಧ್ಯವಾದ ಪ್ರತಿಭೆಯಿಂದ ಜಗತ್ತನ್ನು ಬೆರಗುಗೊಳಿಸುತ್ತಿದೆ ಎಂದು  ಹೇಳಿದ್ದಾರೆ.

ಏಳು ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ವಿವೇಕಾನಂದರ ಸಂದೇಶವನ್ನು ಕನ್ನಡದಲ್ಲಿ ಹೇಳಿದ ಮೋದಿ, ಭಾರತದ ಯುವಸಮೂಹಕ್ಕೆ ವಿವೇಕಾಂದರ ಪ್ರೇರಣೆ ಅಪಾರ. ವಿವೇಕಾಂದರು ಕರ್ನಾಟಕ ಪ್ರವಾಸದ ವೇಳೆ ಹುಬ್ಭಳ್ಳಿ ಧಾರವಾಡ ಆಗಮಿಸಿದ್ದರು. ಮೈಸೂರು ಮಹಾರಾಜರು ಸ್ವಾಮಿ ವಿವೇಕಾನಂದರ ಶಿಕಾಗೋ ಪ್ರವಾಸಕ್ಕೆ ನೆರವಾಗಿದ್ದರು ಎಂದಿದ್ದಾರೆ.

ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, “ಇಂದು ಸ್ವಾಮಿ ವಿವೇಕಾನಂದರ ಜನ್ಮ ದಿನ. ವಿವೇಕಾನಂದರಿಂದ ಪ್ರೇರಣೆ ಪಡೆದು ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ದೇಶದಲ್ಲಿ ಶೇಕಡಾ 40ಕ್ಕೂ ಹೆಚ್ಚು ಯುವಕರು ಇರುವ ದೇಶ ನಮ್ಮದು. ಯುವ ಸಮೂಹಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆ ಜಾರಿ ಮಾಡಲಾಗಿದೆ” ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top