News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಾಜಿ ಕೇಂದ್ರ ಸಚಿವ ಶರದ್‌ ಯಾದವ್‌ ನಿಧನ: ಗಣ್ಯರಿಂದ ಸಂತಾಪ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಆರ್‌ಜೆಡಿ ನಾಯಕ ಶರದ್ ಯಾದವ್ ಗುರುವಾರ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಪುತ್ರಿ ಸಾಮಾಜಿಕ ಜಾಲತಾಣದ ಮೂಲಕ ಖಚಿತಪಡಿಸಿದ್ದಾರೆ. 75 ವರ್ಷ ವಯಸ್ಸಿನ ಹಿರಿಯ ರಾಜಕಾರಣಿ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

ಶರದ್ ಯಾದವ್ ಅವರು ಪ್ರಜಾಸತ್ತಾತ್ಮಕ ಮೌಲ್ಯಗಳಿಗಾಗಿ ಹೋರಾಡಿದ ಎಪ್ಪತ್ತರ ದಶಕದ ವಿದ್ಯಾರ್ಥಿ ನಾಯಕರಾಗಿದ್ದರು ಎಂದು ಮುರ್ಮು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿರಿಯ ಸಂಸದ ಶರದ್ ಯಾದವ್ ಅವರ ನಿಧನಕ್ಕೆ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಸಂದೇಶದಲ್ಲಿ, ಶರದ್ ಯಾದವ್ ಅವರು ಜನಪ್ರಿಯ ನಾಯಕರಾಗಿದ್ದರು, ಚಾಣಾಕ್ಷ ಆಡಳಿತಗಾರರಾಗಿದ್ದರು ಮತ್ತು ಸಾರ್ವಜನಿಕ ಜೀವನದಲ್ಲಿ ಉನ್ನತ ಮಾನದಂಡಗಳನ್ನು ಹೊಂದಿದ್ದರು ಎಂದಿದ್ದಾರೆ.

ಹಿರಿಯ ನಾಯಕನ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಶರದ್ ಯಾದವ್ ಅವರ ನಿಧನದಿಂದ ನನಗೆ ನೋವಾಗಿದೆ, ಸಾರ್ವಜನಿಕ ಜೀವನದ ತಮ್ಮ ಸುದೀರ್ಘ ವರ್ಷಗಳಲ್ಲಿ, ಅವರು ಸಂಸದ ಮತ್ತು ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡರು ಮತ್ತು ಅವರು ಡಾ. ಲೋಹಿಯಾ ಅವರ ಆದರ್ಶಗಳಿಂದ ಹೆಚ್ಚು ಪ್ರೇರಿತರಾಗಿದ್ದರು ಎಂದಿದ್ದಾರೆ.

ಮಾಜಿ ಸಚಿವ ಶರದ್ ಯಾದವ್ ಅವರ ನಿಧನಕ್ಕೆ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸಂತಾಪ ಸೂಚಿಸಿದ್ದಾರೆ. ಶರದ್ ಯಾದವ್ ಅವರು ದಶಕಗಳ ಕಾಲ ಬಿಹಾರ ಮತ್ತು ಭಾರತದ ರಾಜಕೀಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು  ಶಾ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ಸಂತಾಪ ಸೂಚಿಸಿದ್ದಾರೆ.

ಶರದ್‌ ಯಾದವ್ ಮಾಜಿ ಕೇಂದ್ರ ಸಚಿವರಾಗಿ ಮತ್ತು ದಶಕಗಳ ಕಾಲ ಅತ್ಯುತ್ತಮ ಸಂಸದೀಯ ಪಟುವಾಗಿ ಸೇವೆ ಸಲ್ಲಿಸಿ ಸಮಾನತೆಯ ರಾಜಕಾರಣವನ್ನು ಬಲಪಡಿಸಿದವರು ಎಂದು  ಖರ್ಗೆ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top