News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಧಾನಸೌಧದ ಮುಂದೆ ಬಸವಣ್ಣ, ಕೆಂಪೇಗೌಡ ಪುತ್ಥಳಿ ಸ್ಥಾಪನೆಗೆ ಸಿಎಂ ಭೂಮಿ ಪೂಜೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ ಸ್ಥಾಪನೆಗೆ ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ.

ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ವಿಶ್ವಗುರು ಬಸವಣ್ಣ ಮತ್ತು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಚಿಂತನೆಗಳನ್ನು ನಾಡಿಗೆ ತಲುಪಿಸುವ ಉದ್ದೇಶದಿಂದ ವಿಧಾನಸೌಧದ ಆವರಣದಲ್ಲಿ ಇಬ್ಬರು ಮಹನೀಯರ ಪುತ್ಥಳಿಯನ್ನು ಸ್ಥಾಪನೆ ಮಾಡಲಾಗುತ್ತಿದೆ. ಎರಡು ತಿಂಗಳಲ್ಲಿ ಪುತ್ಥಳಿ ನಿರ್ಮಾಣದ ಕಾರ್ಯ ಪೂರ್ಣಗೊಳ್ಳಲಿದೆ ಎಂದಿದ್ದಾರೆ.

ಇಬ್ಬರು ಮಹನೀಯರು ಕರ್ನಾಟಕದ ಸಮಗ್ರ ಅಭಿವೃದ್ಧಿಯ ಚಿಂತನೆಗೆ ಪ್ರೇರಣೆಯಾಗಿದ್ದಾರೆ. ಸಾಮರಸ್ಯ ಮತ್ತು ಸಮಗ್ರ ಅಭಿವೃದ್ಧಿಯ ಗುರಿ ಸಾಧನೆಗಾಗಿ ಇವರ ಪುತ್ಥಳಿ ಸ್ಥಾಪನೆಯಾಗುತ್ತಿದೆ ಎಂದಿದ್ದಾರೆ.

ಭೂಮಿ ಪೂಜೆ  ಸಂದರ್ಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಪಟ್ಟನಾಯಕನ ಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಮುಂತಾದವರು ಉಪಸ್ಥಿತರಿದ್ದರು.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top