ಜಮ್ಮು: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಜಮ್ಮುವಿನಲ್ಲಿ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
ರಜೌರಿಯ ಧಂಗ್ರಿ ಗ್ರಾಮದಲ್ಲಿ ನಡೆದ ಅವಳಿ ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಲು ಶಾ ಇಂದು ಮಧ್ಯಾಹ್ನ ಜಮ್ಮುವಿಗೆ ಆಗಮಿಸಿದರು. ಆದರೆ, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಶಾ ಗಡಿ ಜಿಲ್ಲೆಗೆ ಭೇಟಿ ನೀಡಲು ಸಾಧ್ಯವಾಗಲಿಲ್ಲ.
ಜಮ್ಮುವಿನಲ್ಲಿ ಉನ್ನತ ಮಟ್ಟದ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಾ, “ನಾನು ಮೃತರ ಎಲ್ಲಾ ಏಳು ಕುಟುಂಬಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ, ಅವರನ್ನು ಭೇಟಿ ಮಾಡಲು ನಾನೇ ಅಲ್ಲಿಗೆ ಹೋಗುತ್ತಿದ್ದೆ ಆದರೆ ಇಂದು ನಾವು ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ. ನಾನು ಅವರ ಮಾತುಗಳನ್ನು ಬಹಳ ಎಚ್ಚರಿಕೆಯಿಂದ ಆಲಿಸಿದ್ದೇನೆ ಮತ್ತು ನಾನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಅವರೊಂದಿಗೆ ಮಾತನಾಡಿದ್ದೇನೆ. ಪ್ರಾಣ ಕಳೆದುಕೊಂಡವರ ಧೈರ್ಯವು ದೇಶಕ್ಕೆ ಉದಾಹರಣೆಯಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ನಡೆದಿರುವ ಎಲ್ಲಾ ಘಟನೆಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
“ಭಾರತ ಸರ್ಕಾರವು 2 ದಿನಗಳ ಅವಧಿಯಲ್ಲಿ ನಡೆದ ಎರಡೂ ಘಟನೆಗಳ ತನಿಖೆಯನ್ನು ಎನ್ಐಎಗೆ ನೀಡಿದೆ. ಎನ್ಐಎ ಮತ್ತು ಜಮ್ಮು ಪೊಲೀಸರು ಒಟ್ಟಾಗಿ ತನಿಖೆ ನಡೆಸುತ್ತಾರೆ. ಕಳೆದ ಒಂದೂವರೆ ವರ್ಷಗಳಲ್ಲಿ ನಡೆದ ಎಲ್ಲಾ ಘಟನೆಗಳ ತನಿಖೆ ನಡೆಸಲಾಗುವುದು” ಎಂದಿದ್ದಾರೆ.
Govt of India has given the investigation of both the incidents (terror attack in Dhangri in Jan 1st week), that took place over the course of 2 days, to NIA. The NIA & Jammu Police will together investigate it: Union Home Minister Amit Shah after a high-level meeting in Jammu pic.twitter.com/62ZRS1fKkz
— ANI (@ANI) January 13, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.