News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 8th February 2023


×
Home About Us Advertise With s Contact Us

ಕೊಲ್ಹಾಪುರದಿಂದ ಬೆಂಗಳೂರಿಗೆ ನೇರ ವಿಮಾನ ಉದ್ಘಾಟಿಸಿದ ಸಿಂಧಿಯಾ

ನವದೆಹಲಿ: ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಕೊಲ್ಹಾಪುರದಿಂದ ಬೆಂಗಳೂರಿಗೆ ನೇರ ವಿಮಾನವನ್ನು ಉದ್ಘಾಟಿಸಿದರು.

ಈಗ, ಕೊಲ್ಹಾಪುರದ ವಾಯು ಮಾರ್ಗವು ಹೈದರಾಬಾದ್, ತಿರುಪತಿ, ಮುಂಬೈ, ಅಹಮದಾಬಾದ್ ಮತ್ತು ಬೆಂಗಳೂರುಗಳೊಂದಿಗೆ ಸಂಪರ್ಕ ಹೊಂದಲಿದೆ. ಈ ಮಾರ್ಗದಲ್ಲಿ ಪ್ರತಿದಿನ ಇಂಡಿಗೋ ವಿಮಾನಯಾನ ನಡೆಸಲಿದೆ.

ಕೊಲ್ಹಾಪುರದಲ್ಲಿ ಹೊಸ ವಿಮಾನ ನಿಲ್ದಾಣದ ಟರ್ಮಿನಲ್ ನಿರ್ಮಾಣಕ್ಕಾಗಿ 245 ಕೋಟಿ ರೂಪಾಯಿಗಳ ಹೂಡಿಕೆ ಮಾಡಲಾಗುವುದು ಎಂದು  ಸಿಂಧ್ಯಾ ಈ ಸಂದರ್ಭದಲ್ಲಿ ಹೇಳಿದರು.

ಈ ವೇಳೆ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ, ಜನರಲ್ ಡಾ.ವಿ.ಕೆ.ಸಿಂಗ್ ಅವರು ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top