News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಲಕ್ಷದ್ವೀಪ ಸಂಸದ ಪಿಪಿ ಮೊಹಮ್ಮದ್ ಫೈಜಲ್ ಲೋಕಸಭೆಯಿಂದ ಅನರ್ಹ

ನವದೆಹಲಿ: ಲಕ್ಷದ್ವೀಪದ ಎನ್‌ಸಿಪಿ ಸಂಸದ ಪಿಪಿ ಮೊಹಮ್ಮದ್ ಫೈಜಲ್ ಅವರು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ.

ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಅವರನ್ನು ಅನರ್ಹಗೊಂಡಿದ್ದಾರೆ. 2009 ರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕವರಟ್ಟಿ ಸೆಷನ್ಸ್ ನ್ಯಾಯಾಲಯವು ಅವರು ಸೇರಿದಂತೆ ಮೂವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

2009 ರ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಕ್ಷದ್ವೀಪದ ಕವರಟ್ಟಿಯ ಸೆಷನ್ಸ್ ನ್ಯಾಯಾಲಯವು ಈ ವಾರದ ಆರಂಭದಲ್ಲಿ ಫೈಝಲ್ ಅವರನ್ನು ಇತರ ಮೂವರೊಂದಿಗೆ ಅಪರಾಧಿ ಎಂದು ಘೋಷಿಸಿತ್ತು ಮತ್ತು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಪಡಿಸಿತ್ತು. ಬಳಿಕ ಅವರನ್ನು ಕಣ್ಣೂರು ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.

2009 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಪ್ರೇರಿತವಾಗಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಶಿಕ್ಷೆಯಾಗಿದೆ.

ಲೋಕಸಭೆಯ ಸೆಕ್ರೆಟರಿಯೇಟ್ ಅವರನ್ನು ಅನರ್ಹಗೊಳಿಸುವ ಕುರಿತು ಅಧಿಸೂಚನೆಯನ್ನು ಹೊರಡಿಸಿದೆ.

ಶುಕ್ರವಾರ ಹೊರಡಿಸಿದ ಅಧಿಸೂಚನೆಯ ನಂತರ ಜನವರಿ 11, 2023 ರ ಬುಧವಾರದಿಂದ ಜಾರಿಗೆ ಬರುವಂತೆ ಫೈಝಲ್ ಅವರು ಜನಪ್ರತಿನಿಧಿಯಾಗಿರುವುದಿಲ್ಲ ಎಂದು ತಿಳಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top