News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 8th February 2023


×
Home About Us Advertise With s Contact Us

ಗಡ್ಕರಿಗೆ ದಾವೂದ್‌ ಹೆಸರಲ್ಲಿ ಬೆದರಿಕೆ ಕರೆ: ಭದ್ರತೆ ಹೆಚ್ಚಳ

ನವದೆಹಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಬಂದಿದೆ.  ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆಗಳನ್ನು ಮಾಡಿ ಅವರನ್ನು ಹತ್ಯೆ ಮಾಡುವ ಬೆದರಿಕೆ ಹಾಕಲಾಗಿದೆ.

ವರದಿಗಳ ಪ್ರಕಾರ,  ನಾಗ್ಪುರದಲ್ಲಿರುವ ಗಡ್ಕರಿ ಅವರ ಕಚೇರಿಗೆ ಎರಡು ಬಾರಿ ಬೆದರಿಕೆ ಕರೆ ಬಂದಿದೆ. ಇಂದು ಬೆಳಗ್ಗೆ 11.30ರಿಂದ 12.30ರ ನಡುವೆ ಬೆದರಿಕೆ ಕರೆಗಳು ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ

ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಕರೆ ಮಾಡಿರುವ ಅಪರಿಇತರು ಹಣ ನೀಡಬೇಕು ಇಲ್ಲವಾದರೆ ಕೊಲ್ಲುವುದಾಗಿ ಬೆದರಿಸಿದ್ದಾರೆ. ಕರೆ ಮಾಡಿದವರು ದಾವೂದ್ ಹೆಸರನ್ನೂ ಬಳಸಿದ್ದಾರೆ ಎನ್ನಲಾಗಿದೆ.

ಬೆದರಿಕೆ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಕಚೇರಿ ಮತ್ತು ಮನೆಯ ಸುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡ್ಕರಿ ಅವರು ಪ್ರಸ್ತುತ ಮಕರ ಸಂಕ್ರಾಂತಿ ಹಬ್ಬಕ್ಕಾಗಿ ನಾಗ್ಪುರದಲ್ಲಿದ್ದಾರೆ ಎಂದು ಹೇಳಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top