News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

1500 ಗ್ರಾಮ ಪಂಚಾಯತುಗಳಲ್ಲಿ ಗೋ ಶಾಲೆ ನಿರ್ಮಿಸಲಿದೆ ರಾಜಸ್ಥಾನ

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಮ್ಮ ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ಗೋಶಾಲೆ ನಿರ್ಮಾಣಕ್ಕಾಗಿ ಸಾರ್ವಜನಿಕ ಸಹಭಾಗಿತ್ವ ಯೋಜನೆಗೆ ಒಪ್ಪಿಗೆ ನೀಡಿದ್ದಾರೆ. ಯೋಜನೆಯ ಮೊದಲ ಹಂತದಲ್ಲಿ 1500 ಗ್ರಾಮ ಪಂಚಾಯತುಗಳಲ್ಲಿ ಗೋ ಶಾಲೆ ನಿರ್ಮಾಣ ಮತ್ತು ಕಾರ್ಯಾಚರಣೆಗೆ ಸುಮಾರು 1377 ಕೋಟಿ ರೂಪಾಯಿಗಳ ಆರ್ಥಿಕ ನಿಬಂಧನೆಗೂ ಅವರು ಅನುಮೋದನೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೋಜನೆಯಡಿಯಲ್ಲಿ, ಆ ಗ್ರಾಮ ಪಂಚಾಯತ್‌ಗಳಲ್ಲಿ ಗೋಶಾಲೆಗಳನ್ನು ಸ್ಥಾಪಿಸಲಾಗುತ್ತಿದೆ, ಗ್ರಾಮ ಪಂಚಾಯತ್ / ಸ್ವಯಂಸೇವಾ ಸಂಸ್ಥೆ ಅವುಗಳನ್ನು ನಡೆಸಲಿವೆ. ಈ ಉದ್ದೇಶಕ್ಕಾಗಿ ಆದ್ಯತೆಯ ಮೇಲೆ ಒಂದು ಕೋಟಿ ರೂಪಾಯಿಗಳ ನಿಧಿಯನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲಾಗುತ್ತದೆ. ಈ ಯೋಜನೆಯಡಿ 2022-23ನೇ ಸಾಲಿನಲ್ಲಿ 200 ಗ್ರಾಮ ಪಂಚಾಯತಿಗಳಲ್ಲಿ ಮತ್ತು 2023-24ರಲ್ಲಿ 1300 ಗೋಶಾಲೆ ನಿರ್ಮಿಸಲಾಗುವುತ್ತದೆ. ವೆಚ್ಚದಲ್ಲಿ ರಾಜ್ಯ ಸರ್ಕಾರ ಶೇ 90 ಮತ್ತು ನಿರ್ವಹಣೆ ಮಾಡುವ  ಸಂಸ್ಥೆ ಶೇ 10ರಷ್ಟು ಭರಿಸಲಿದೆ.

2022-23ನೇ ಸಾಲಿನಲ್ಲಿ 183.60 ಕೋಟಿ ಹಾಗೂ 2023-24ನೇ ಸಾಲಿಗೆ 1193.40 ಕೋಟಿ ಸೇರಿದಂತೆ ಒಟ್ಟು 1377 ಕೋಟಿ ರೂ.ಗಳನ್ನು ಗೋಶಾಲೆ ನಿರ್ಮಾಣ ಮತ್ತು ಕಾರ್ಯಾಚರಣೆಗೆ ಮುಖ್ಯಮಂತ್ರಿಗಳು ಅನುಮೋದಿಸಿದ್ದಾರೆ. ಗೆಹ್ಲೋಟ್ ಅವರ ನಿರ್ಧಾರವು  ನಿರ್ಗತಿಕ ಪ್ರಾಣಿಗಳಿಗೆ ಶಾಶ್ವತ ಆಶ್ರಯವನ್ನು ಒದಗಿಸುತ್ತದೆ. ಇದು ರೈತರನ್ನು ಬಿಡಾಡಿ ಪ್ರಾಣಿಗಳ ಸಮಸ್ಯೆಯಿಂದ ಮುಕ್ತಿಗೊಳಿಸಲಿದೆ. ರಾಜ್ಯ ಸರ್ಕಾರವು 2022-23ನೇ ಸಾಲಿನ ಬಜೆಟ್‌ನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಗೋಶಾಲೆ/ಪ್ರಾಣಿ ಆಶ್ರಯ ಕೇಂದ್ರಗಳನ್ನು ನಡೆಸುವುದಾಗಿ ಘೋಷಿಸಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top