News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶೀಘ್ರದಲ್ಲೇ ರಾಜ್ಯದಲ್ಲಿ ಜಾರಿಯಾಗಲಿದೆ ʼರೈತ ಶಕ್ತಿ ಯೋಜನೆʼ

ಬೆಂಗಳೂರು : ರೈತಾಪಿ ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ” ಈ ತಿಂಗಳಾಂತ್ಯಕ್ಕೆ ಸಿಎಂ ಚಾಲನೆ‌ ನೀಡಲಿದ್ದಾರೆ.

ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ. ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022-23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ “ರೈತ ಶಕ್ತಿ ಯೋಜನೆ” ಇದೇ ತಿಂಗಳಾಂತ್ಯಕ್ಕೆ ಜಾರಿಯಾಗಲಿದೆ.

ಪ್ರತಿ ಎಕರೆಗೆ ರೂ. 250/- ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡುವ ” ರೈತ ಶಕ್ತಿ” ಯೋಜನೆಯನ್ನು ಈ ತಿಂಗಳಾಂತ್ಯಕ್ಕೆ ಅನುಷ್ಠಾನಗೊಳ್ಳುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ.

ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು, ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ (DBT) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.

ನಗದು ಯೋಜನೆಯ FRUITS ಪೋರ್ಟಲ್­ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ, ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್‌ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು.

FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್‌ ಸಹಾಯಧನವನ್ನು ನೇರ ನಗದು ವರ್ಗಾವಣೆ (DBT) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು. FRUITS ತಂತ್ರಾಂಶದಲ್ಲಿ ನೋಂದಾವಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ ರೂ. 250 / – ರಂತೆ ಗರಿಷ್ಠ ಐದು ಎಕರೆಗೆ ರೂ. 1250 / – ರವರಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು. ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top