News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋವಿಡ್‌ ಲಸಿಕೆ ಅಭಿಯಾನಕ್ಕೆ 2 ವರ್ಷ: ದೇಶಕ್ಕೆ ಮಾಂಡವೀಯ ಅಭಿನಂದನೆ

ನವದೆಹಲಿ: ಭಾರತವು ಕೋವಿಡ್ -19 ವಿರುದ್ಧ ಲಸಿಕೆ ಅಭಿಯಾನವನ್ನು ನಡೆಸಿ ಇಂದಿಗೆ ಎರಡು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಜನರನ್ನು ಅಭಿನಂದಿಸಿದ್ದಾರೆ. ವಿಶ್ವದ ಅತಿ ದೊಡ್ಡ ಮತ್ತು ಅತ್ಯಂತ ಯಶಸ್ವಿ ವ್ಯಾಕ್ಸಿನೇಷನ್ ಡ್ರೈವ್ ನಿರಂತರವಾಗಿ ವೇಗ ಮತ್ತು ಪ್ರಮಾಣದಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಟ್ವೀಟ್‌ ಮಾಡಿರುವ ಮಾಂಡವೀಯಾ, ಈ ಲಸಿಕೆ ಅಭಿಯಾನವು ಪ್ರಧಾನಿಯವರ ಸ್ಪೂರ್ತಿದಾಯಕ ನಾಯಕತ್ವದಲ್ಲಿ ಅಪ್ರತಿಮವಾಗಿ ಯಶಸ್ಸು ಸಾಧಿಸಿದೆ ಎಂದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಬ್ಕಾ ಪ್ರಯಾಸ್ ಧ್ಯೇಯದಿಂದ ನಡೆಸಲ್ಪಡುತ್ತಿರುವ ಭಾರತದ ಕೋವಿಡ್ ಲಸಿಕೆ ಅಭಿಯಾನವು ಇತಿಹಾಸ ಪುಸ್ತಕಗಳಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದಿದ್ದಾರೆ.

ಲಸಿಕಾ ಅಭಿಯಾನದ ಯಶಸ್ಸಿಗಾಗಿ ಅವರು ವೈದ್ಯರು, ನವೋದ್ಯಮಿಗಳು, ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರನ್ನು ಶ್ಲಾಘಿಸಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಈ ಸಾಧನೆಯನ್ನು ಶ್ಲಾಘಿಸಿದ್ದು, ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತ ಲಸಿಕೆ ಅಭಿಯಾನವು ವಿಶ್ವಕ್ಕೆ ಮಾದರಿಯಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ಭಾರತವು 2021ರ ಜನವರಿ 16ರಂದು ಲಸಿಕೆ ಅಭಿಯಾನವನ್ನು ಪ್ರಾರಂಭಿಸಿತ್ತು. ಇಲ್ಲಿಯವರೆಗೆ, ದೇಶದಲ್ಲಿ 220 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದ್ದು,  ಸಾಂಕ್ರಾಮಿಕದ ಭೀತಿಯಿಂದ ಜನರನ್ನು ರಕ್ಷಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top